ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್: ಇವಿಎಂ ಇದ್ದರೂ ಫಲಿತಾಂಶ ವಿಳಂಬ

Last Updated 30 ಡಿಸೆಂಬರ್ 2020, 12:30 IST
ಅಕ್ಷರ ಗಾತ್ರ

ಬೀದರ್: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬೀದರ್‌ ಜಿಲ್ಲೆಯಲ್ಲಿ ಮಾತ್ರ ಎಲೆಕ್ಟ್ರಾನಿಕ್‌ ಮತ ಯಂತ್ರ ಬಳಸಿದ್ದರಿಂದ ಮಧ್ಯಾಹ್ನದ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ ಎನ್ನುವ ನಿರೀಕ್ಷೆ ಹುಸಿಯಾಯಿತು. ಬಹುತೇಕ ಹೊಸ ಅಧಿಕಾರಿಗಳೇ ಚುನಾವಣೆ ಕರ್ತವ್ಯದಲ್ಲಿದ್ದ ಕಾರಣ ಎಲ್ಲ ಪಂಚಾಯಿತಿಗಳ ಫಲಿತಾಂಶ ಪ್ರಕಟವಾಗಲು ವಿಳಂಬವಾಯಿತು.

ಅಧಿಕಾರಿಗಳು ಗೊಂದಲದಲ್ಲೇ ಕಾರ್ಯನಿರ್ವಹಿಸುತ್ತಿದ್ದರು. ಫಲಿತಾಂಶ ಖಚಿತ ಪಡಿಸಿಕೊಳ್ಳಲು ಬಹಳ ಸಮಯ ತೆಗೆದುಕೊಳ್ಳುತ್ತಿದ್ದರು. ಈ ಕಾರಣಕ್ಕೆ ಸಕಾಲಕ್ಕೆ ಫಲಿತಾಂಶ ಹೊರ ಬೀಳಲಿಲ್ಲ. ಮಾಧ್ಯಮ ಪ್ರತಿನಿಧಿಗಳಿಗೂ ಸಕಾಲದಲ್ಲಿ ಮಾಹಿತಿ ಕೊಡುವ ವ್ಯವಸ್ಥೆ ಆಗಲಿಲ್ಲ.

2015ರಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲೂ ಇವಿಎಂ ಬಳಸಲಾಗಿತ್ತು. ಅಂದಿನ ಜಿಲ್ಲಾಧಿಕಾರಿ ಪಿ.ಸಿ.ಜಾಫರ್‌ ಅವರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮತ ಎಣಿಕೆ ಕಾರ್ಯ ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಂಡಿದ್ದರು. ಆದರೆ, ಈ ಬಾರಿ ಪೂರ್ವ ಸಿದ್ಧತೆಯ ಕೊರತೆಯಿಂದ ಅಧಿಕಾರಿಗಳು ಮುಜುಗರ ಅನುಭವಿಸುವಂತಾಯಿತು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಹೆಚ್ಚು ಮತಗಳನ್ನು ಪಡೆದು ಸಾಮಾನ್ಯ ಕ್ಷೇತ್ರದಿಂದ ಚುನಾಯಿತರಾದಾಗ ಸೋತ ಅಭ್ಯರ್ಥಿಗಳಿಗೆ ಮನವರಿಕೆ ಮಾಡುವಲ್ಲಿ ಅಧಿಕಾರಿಗಳು ವಿಫಲರಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT