ಸೋಮವಾರ, ಆಗಸ್ಟ್ 10, 2020
21 °C

ವೇತನ ಬಿಡುಗಡೆಗೆ ಹೊರಗುತ್ತಿಗೆ ನೌಕರರ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಮೊರಾರ್ಜಿ ದೇಸಾಯಿ, ಅಟಲ್ ಬಿಹಾರಿ ವಾಜಪೇಯಿ, ಕಿತ್ತೂರು ರಾಣಿ ಚನ್ನಮ್ಮ, ಡಾ.ಬಿ.ಆರ್.ಅಂಬೇಡ್ಕರ್,  ಇಂದಿರಾ ಗಾಂಧಿ ಹಾಗೂ ಏಕಲವ್ಯ ವಸತಿ ಶಾಲೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಥಮ ದರ್ಜೆ ಸಹಾಯಕರು ಹಾಗೂ ಶುಶ್ರೂಷಕರ ಮೂರು ತಿಂಗಳ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಆಗ್ರಹಿಸಿದೆ.

ಬೀದರ್ ಜಿಲ್ಲೆಯಲ್ಲಿ ಒಟ್ಟು 29 ವಸತಿ ಶಾಲೆಗಳಿವೆ. 54 ನೌಕರರು ಕಾರ್ಯ ನಿರ್ವಹಿಸುತ್ತಿದ್ದಾರೆ. ಕೊರೊನಾ ಸೋಂಕಿನ ಕಾರಣ ಲಾಕ್‍ಡೌನ್ ವಿಧಿಸಿದಾಗಿನಿಂದ ಹೊರಗುತ್ತಿಗೆ ನೌಕರರು ವೇತನ ಇಲ್ಲದೆ, ಕೆಲಸವೂ ಇಲ್ಲದೆ ಸಂಕಷ್ಟದಲ್ಲಿ ಇದ್ದಾರೆ ಎಂದು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ದೂರಿದೆ.

ತಕ್ಷಣ ಬಾಕಿ ವೇತನ ಪಾವತಿಸಬೇಕು. ಪ್ರಸ್ತುತ ಶೈಕ್ಷಣಿಕ ವರ್ಷಕ್ಕೂ ಹೊರ ಗುತ್ತಿಗೆ ನೌಕರರ ಸೇವೆ ಮುಂದುವರಿಸಬೇಕು. ಸೇವಾ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದೆ.

ಸಂಘದ ರಾಜ್ಯ ಘಟಕದ ಗೌರವಾಧ್ಯಕ್ಷ ಜಗನ್ನಾಥ ಬಿರಾದಾರ, ಜಿಲ್ಲಾ ಘಟಕದ ಗೌರವಾಧ್ಯಕ್ಷ ರಾಜಕುಮಾರ ಜಟಗೊಂಡ, ಅಧ್ಯಕ್ಷ ಗೋಪಾಲ ಕುಲಕರ್ಣಿ ಹಾಗೂ ಪ್ರಧಾನ ಕಾರ್ಯದರ್ಶಿ ರಜನಿಕಾಂತ ಸಿಂಧೆ ಮನವಿ ಪತ್ರಕ್ಕೆ ಸಹಿ ಹಾಕಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.