ಸೋಮವಾರ, ಆಗಸ್ಟ್ 8, 2022
24 °C

ಬಿತ್ತನೆ ಬೀಜದ ಕೊರತೆ ನೀಗಿಸಿ: ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಜಿಲ್ಲೆಯಲ್ಲಿ ಬಿತ್ತನೆ ಬೀಜದ ಕೊರತೆ ನೀಗಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ಆಗ್ರಹಿಸಿದ್ದಾರೆ.

ಕೋವಿಡ್ ಕಾರಣ ರೈತರು ಸಂಕಷ್ಟದಲ್ಲಿದ್ದಾರೆ. ಈ ಬಾರಿ ಉತ್ತಮ ಮಳೆಯಾಗುತ್ತಿರುವುದರಿಂದ ಮುಂಗಾರು ಕೈಹಿಡಿಯುವ ನಿರೀಕ್ಷೆಯಲ್ಲಿ ಇದ್ದಾರೆ. ಆದರೆ, ಬೀಜ ಸಿಗದೆ ಇರುವುದು ಅವರಿಗೆ ಆಘಾತ ಉಂಟು ಮಾಡಿದೆ ಎಂದು ಹೇಳಿದ್ದಾರೆ.

ಸೋಯಾಬೀನ್ ಬೆಳೆಯುವಲ್ಲಿ ಇಡೀ ರಾಜ್ಯದಲ್ಲೇ ಬೀದರ್ ಅಗ್ರಸ್ಥಾನದಲ್ಲಿ ಇದೆ. ಪ್ರಸಕ್ತ ವರ್ಷ ಜಿಲ್ಲೆಯ 1.80 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸೋಯಾಬೀನ್ ಬಿತ್ತನೆ ಗುರಿ ಇದೆ. ಆದರೆ, ಅಧಿಕಾರಿಗಳು ಮುಂಚಿತವಾಗಿಯೇ ಅಗತ್ಯ ಬೀಜ ದಾಸ್ತಾನಿಗೆ ಸಿದ್ಧತೆ ಮಾಡಿಕೊಂಡಿಲ್ಲ. ಹೀಗಾಗಿ ಸೋಯಾಬೀನ್ ಬೀಜದ ಕೊರತೆ ಎದುರಾಗಿದೆ ಎಂದು ಆರೋಪಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರ ತವರು ಕ್ಷೇತ್ರ ಔರಾದ್ ಸೇರಿದಂತೆ ಜಿಲ್ಲೆಯಾದ್ಯಂತ ಸೋಯಾಬೀನ್ ಬೀಜದ ಅಭಾವ ಉಂಟಾಗಿದೆ. ಎರಡು ವಾರಗಳಿಂದ ರೈತರು ಬೀಜಕ್ಕಾಗಿ ನಿತ್ಯ ರೈತ ಸಂಪರ್ಕ ಕೇಂದ್ರಕ್ಕೆ ಅಲೆದಾಡುತ್ತಿದ್ದಾರೆ. ಕೃಷಿ ಅಧಿಕಾರಿಗಳಿಗೆ ಘೇರಾವ್ ಹಾಕಿ, ರೈತ ಸಂಪರ್ಕ ಕೇಂದ್ರದ ಎದುರು ಪ್ರತಿಭಟನೆಯನ್ನೂ ಮಾಡಿದ್ದಾರೆ. ಆದರೂ, ಸರ್ಕಾರ ಈವರೆಗೆ ಬಿತ್ತನೆ ಬೀಜ ಪೂರೈಕೆಗೆ ಕ್ರಮ ಕೈಗೊಂಡಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಗೆ ತಕ್ಷಣ ಸೋಯಾಬೀನ್ ಸೇರಿದಂತೆ ಅಗತ್ಯ ಬಿತ್ತನೆ ಬೀಜ ಪೂರೈಸಬೇಕು. ಈ ಮೂಲಕ ರೈತರ ಹಿತ ಕಾಪಾಡಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು