ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ: ಎಬಿವಿಪಿ ಪ್ರತಿಭಟನೆ

Published 29 ಫೆಬ್ರುವರಿ 2024, 7:52 IST
Last Updated 29 ಫೆಬ್ರುವರಿ 2024, 7:52 IST
ಅಕ್ಷರ ಗಾತ್ರ

ಬೀದರ್‌: ‘ಪ್ರಜಾಪ್ರಭುತ್ವದ ದೇಗುಲ ವಿಧಾನಸೌದದಲ್ಲಿ ‘ಪಾಕಿಸ್ತಾನ ಜಿಂದಾಬಾದ್‌’ ಎಂದು ಘೋಷಣೆ ಕೂಗಿರುವುದು ಖಂಡನಾರ್ಹವಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಬಳಿಕ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸೈಯದ್‌ ನಾಸೀರ್ ಹುಸೇನ್ ಅವರ ಗೆಲುವಿನ ಸಂದರ್ಭದಲ್ಲಿ ಅವರ ಬೆಂಬಲಿಗರು ‘ಪಾಕಿಸ್ತಾನ ಜಿಂದಾಬಾದ್’ ಎಂದು ಕೂಗಿರುವುದು ಖಂಡನೀಯ. ಕೂಡಲೇ ಸರ್ಕಾರ ತಪ್ಪಿಸ್ಥರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಘೋಷಣೆ ಕೂಗುವ ಸಂದರ್ಭದಲ್ಲಿ ಇತರೆ ಮುಖಂಡರು ಅಲ್ಲಿದ್ದರೂ ಅದನ್ನು ತಡೆಯುವ ಕೆಲಸ ಮಾಡಲಿಲ್ಲ. ನಾಸೀರ್‌ ಹುಸೆನ್‌ ಅವರು ವಿರೋಧಿಸಲಿಲ್ಲ. ಇದನ್ನು ಪ್ರಶ್ನಿಸಿದ ಮಾಧ್ಯಮದವರ ಮೇಲೆ ದರ್ಪ ತೋರಿರುವುದು ಸರಿಯಲ್ಲ ಎಂದರು.

ಪಾಕಿಸ್ತಾನ ಪರ ಘೋಷಣೆ ಕೂಗಿದ ವ್ಯಕ್ತಿಯ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಬೇಕು. ಈ ಪ್ರಕರಣದ ತನಿಖೆ ಪೂರ್ಣಗೊಳ್ಳುವವರೆಗೆ ನಾಸೀರ್‌ ಹುಸೇನ್‌ ಅವರಿಗೆ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ಕಲ್ಪಿಸಬಾರದುಎಂದು ಆಗ್ರಹಿಸಿದರು.

ಎಬಿವಿಪಿ ತಾಲ್ಲೂಕು ಸಂಚಾಲಕ ಅಂಬ್ರೇಶ ಬಿರಾದಾರ, ಸಂಘಟನಾ ಕಾರ್ಯದರ್ಶಿ ಹೇಮಂತ, ಲಕ್ಷ್ಮಿಕಾಂತ, ಅಮರಸ್ವಾಮಿ, ಪವನ ಕುಂಬಾರ, ಅಮಿತ ಸೊರಳ್ಳಿ, ನಾಗರಾಜ ಸಾಯಿಕಿರಣ, ಆನಂದ, ಮಂಜುನಾಥ್, ಪವನ್ ಪ್ರಸಾದ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT