ಭಾಲ್ಕಿ: ತಾಲ್ಲೂಕಿನ ಮೈಲಾರ ಗ್ರಾಮದಲ್ಲಿ ವಿಜಯದಶಮಿ ನಿಮಿತ್ತ ಮಲ್ಲಣ್ಣ ದೇವರ ಪಲ್ಲಕ್ಕಿ ಮೆರವಣಿಗೆ ಸಂಭ್ರಮದಿಂದ ಜರುಗಿತು.

ಮಲ್ಲಣ್ಣ ದೇಗುಲದಲ್ಲಿ ಗುರುವಾರ ರಾತ್ರಿ 11 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಮಲ್ಲಣ್ಣ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಆರತಿ ಬೆಳಗಿ ಪಲ್ಲಕ್ಕಿ ಮೆರವಣಿಗೆ, ರಥೋತ್ಸವಕ್ಕೆ ಚಾಲನೆ ನೀಡಿದರು.

ಪಲ್ಲಕ್ಕಿ ಮೆರವಣಿಗೆ ಘೃತಮಾರಿ ತುಪ್ಪದ ಮಾಳವ್ವ(ಗುರುತ ಮಲ್ಲಮ್ಮ ) ದೇವಸ್ಥಾನ, ಮುಖ್ಯ ಬೀದಿ, ಬೀದರ್-ಭಾಲ್ಕಿ ಮುಖ್ಯ ರಸ್ತೆ ಮೂಲಕ ಹಾದು ಹನುಮಾನ ದೇವಸ್ಥಾನ ತಲುಪಿತು. ಮೆರವಣಿಗೆಯುದ್ದಕ್ಕೂ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ದೇವಸ್ಥಾನದ ವಗ್ಗೆಯರು, ವಾರುಗಳು, ಭಕ್ತರು ಕುಣಿದು ಸಂಭ್ರಮಿಸಿದರು.

ಶುಕ್ರವಾರ ಬೆಳಿಗ್ಗೆ 6 ಗಂಟೆಗೆ ಮಹಾ ಮಂಗಳಾರತಿಯೊಂದಿಗೆ ಉತ್ಸವ ಸಮಾರೋಪಗೊಂಡಿತು.

ಮಾಜಿ ಸಚಿವರಾದ ಬಂಡೆಪ್ಪ ಖಾಶೆಂಪೂರ, ರಾಜಶೇಖರ ಪಾಟೀಲ, ಮೀನುಗಾರಿಕೆ ನಿಗಮ ಮಂಡಳಿ ಅಧ್ಯಕ್ಷೆ ಮಾಲಾ ಬಿ. ನಾರಾಯಣರಾವ, ವಿಧಾನ ಪರಿಷತ್ ಮಾಜಿ ಸದಸ್ಯ ಅರವಿಂದಕುಮಾರ ಅರಳಿ, ಬಿಡಿಎ ಮಾಜಿ ಅಧ್ಯಕ್ಷ ಪಂಡಿತ ಚಿದ್ರಿ, ಹಾಲು ಒಕ್ಕೂಟದ ನಿರ್ದೇಶಕ ಮಲ್ಲಿಕಾರ್ಜುನ ಬಿರಾದಾರ, ದೇವಸ್ಥಾನದ ಆಡಳಿತಾಧಿಕಾರಿ, ಬಸವಕಲ್ಯಾಣ ಉಪವಿಭಾಗಾಧಿಕಾರಿ ಮುಕುಲ್ ಜೈನ್, ಕಾರ್ಯನಿರ್ವಾಹಣಾಧಿಕಾರಿ ಅನಂತರಾವ್ ಕುಲಕರ್ಣಿ, ವ್ಯವಸ್ಥಾಪಕ ಸಂಜೀವಕುಮಾರ ಸುಂಧಾಳ, ಮಾರುತಿ ಪಾಟೀಲ, ರಾಜಕುಮಾರ ಪಾಟೀಲ, ಪ್ರಧಾನ ಅರ್ಚಕ ಬಸಪ್ಪ ಹಿರಿವಗ್ಗೆ, ಮಲ್ಲಿಕಾರ್ಜುನ ಹಿರಿವಗ್ಗೆ, ಪ್ರಕಾಶ ಹಿರಿವಗ್ಗೆ, ಆಕಾಶ ಹಿರಿವಗ್ಗೆ, ಪಂಡಿತ, ಬೀರಪ್ಪ ಪೂಜಾರಿ ಸೇರಿದಂತೆ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.