ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ಪಂಚಾಯತ್‌ ನೌಕರರಿಂದ ಧರಣಿ

Last Updated 24 ಮೇ 2019, 15:12 IST
ಅಕ್ಷರ ಗಾತ್ರ

ಬೀದರ್‌:ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರು ಮುಖಂಡ ಮಾರುತಿ ಮಾನ್ಪಡೆ ನೇತೃತ್ವದಲ್ಲಿ ಬೀದರ್ ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ಶುಕ್ರವಾರ ಧರಣಿ ನಡೆಸಿದರು.

ತುಟ್ಟಿ ಭತ್ಯೆ ಸೇರಿಸಿ ಕನಿಷ್ಠ ವೇತನ ನೀಡಬೇಕು. ಅನುಮೋದನೆ ಆಗದೆ ಇರುವ ಸಿಬ್ಬಂದಿ ಪ್ರಸ್ತಾವಗಳನ್ನು ಆಯಾ ಗ್ರಾಮ ಪಂಚಾಯಿತಿಯಿಂದ ತರಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.

ಬಡ್ತಿ ಮೂಲಕ ನೇಮಕಾತಿ ಪ್ರತ್ರಿಕೆಯನ್ನು ಆರಂಭಿಸಬೇಕು. ನಿವೃತ್ತ ನೌಕರರಿಗೆ ಉಪದಾನ ಕೊಡಬೇಕು. ನೌಕರರ ಸೇವಾ ಪುಸ್ತಕ ತೆರೆಯಬೇಕು. ನಿವೃತ್ತಿ ವೇತನ, ಗಳಿಕೆ ರಜೆ, ವಾರಕ್ಕೊಂದು ವೇತನ ಸಹಿತ ರಜೆ, ವೆದ್ಯಕೀಯ ವೆಚ್ಚಕೊಡಬೇಕು ಎಂದು ಎಂದು ಒತ್ತಾಯಿಸಿದರು.

ಬಿಲ್ ಕಲೆಕಲೆಕ್ಟರ್ ಹುದ್ದೆಯಿಂದ ಗ್ರೇಡ್–2 ಕಾರ್ಯದರ್ಶಿ ಹಾಗೂ ಲೆಕ್ಕ ಸಹಾಯಕ ಹುದ್ದೆಗೆ ಬಡ್ತಿ ನೀಡಲು ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಬೇಕು. ಐದು ವರ್ಷ ಸೇವೆ ಸಲ್ಲಿಸಿದ ವಾಟರ್‌ಮನ್, ಸಫಾಯಿ ನೌಕರರಿಗೆ ಕರ ವಸೂಲಿಗಾರರ ಹುದ್ದೆಗೆ ಬಡ್ತಿ ನೀಡಬೇಕು ಎಂದು ಆಗ್ರಹಿಸಿದರು.

ನಂತರ ರಾಜ್ಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ಸಲ್ಲಿಸಿದರು.

ಸಂಘದ ರಾಜ್ಯ ಸಮಿತಿ ಸದಸ್ಯ ರಾಜಪ್ಪ ಮಡಿವಾಳ ಹಾಗೂ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಚಂದ್ರಕಾಂತ ಸ್ವಾಮಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT