ಬುಧವಾರ, ಸೆಪ್ಟೆಂಬರ್ 22, 2021
22 °C

ಪಾಂಡುರಂಗ ಪಲ್ಲಕ್ಕಿ ಮೆರವಣಿಗೆ 24ರಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ಪಾಂಡುರಂಗ ದೇವಸ್ಥಾನ ಸಮಿತಿ ಆಷಾಢ ಪ್ರಯುಕ್ತ ಜುಲೈ 24ರಂದು ಪಲ್ಲಕ್ಕಿ ಮೆರವಣಿಗೆ ನಡೆಸಲಿದೆ.

ಶನಿವಾರ ಮಧ್ಯಾಹ್ನ 1 ಗಂಟೆಗೆ ದೇವಸ್ಥಾನ ಆವರಣದಿಂದ ಮೆರವಣಿಗೆ ಆರಂಭವಾಗಿ ಸಂಜೆ 6 ಗಂಟೆಗೆ ದಾಮಾಜಿ ಪಂಥ ಅಗಸಿಗೆ (ಶಹಾಗಂಜ್‌ ಕಮಾನ್) ಬರಲಿದೆ. ನಂತರ ಅಲ್ಲಿ ಮೊಸರಿನ ಗಡಗಿ ಒಡೆಯುವ ಸಾಂಕೇತಿಕ ಕಾರ್ಯಕ್ರಮ ನಡೆಯಲಿದೆ.

ಕೋವಿಡ್‌ ಕಾರಣ ಸರ್ಕಾರದ ಮಾರ್ಗಸೂಚಿಯಂತೆ ಕೇವಲ ಪುರೋಹಿತರು ಹಾಗೂ ದೇವಸ್ಥಾನದ ಆಡಳಿತ ಮಂಡಳಿಯವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನೆರವೇರಿಸಲು ನಿರ್ಧರಿಸಲಾಗಿದೆ. ಹೀಗಾಗಿ ಕಾರ್ಯಕ್ರಮದಲ್ಲಿ ಹೆಚ್ಚಿನ ಜನ ಪಾಲ್ಗೊಳ್ಳಬಾರದು ಎಂದು ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಡಿ.ವಿ.ಸಿಂಧೋಲ್ ಹಾಗೂ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಗಾದಾ ಮನವಿ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು