ಸೋಮವಾರ, 15 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಹಣದ ಬಲದಿಂದ ಪರಿಷತ್‌, ಲೋಕಸಭೆ ಗೆಲುವು’

Published 19 ಜೂನ್ 2024, 16:28 IST
Last Updated 19 ಜೂನ್ 2024, 16:28 IST
ಅಕ್ಷರ ಗಾತ್ರ

ಹುಮನಾಬಾದ್: ಈಚೆಗೆ ನಡೆದ ಈಶಾನ್ಯ ಪದವೀಧರ ಕ್ಷೇತ್ರ ಹಾಗೂ ಬೀದರ್ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್‌ನವರು ಕೋಟಿಗಟ್ಟಲೆ ಹಣ ನೀಡಿ ಚುನಾವಣೆಯಲ್ಲಿ ಗೆದ್ದಿದ್ದಾರೆ ಎಂದು ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ ಆರೋಪಿಸಿದರು.

ಪಟ್ಟಣದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯ ಮತದಾನದ ದಿನದಂದು ಮತಗಟ್ಟೆಗಳ ಮುಂದೆಯೇ ಹಣ ಹಂಚಿಕೆ ಮಾಡಿದ್ದರು. ಹೀಗಾಗಿ ಇದು ಹಣದ ತೀರ್ಪು. ಮತದಾರದ್ದು ಅಲ್ಲ ಎಂದರು.

20 ವರ್ಷಗಳಿಂದ ಹುಮನಾಬಾದ್‌ನಲ್ಲಿನ ಹುಖಮಶಾಹಿ ಆಡಳಿತವನ್ನು ಕ್ಷೇತ್ರದ ಜನರು ಈ ಬಾರಿ ಬದಲಾಯಿಸಿದ್ದು. ಇಲ್ಲಿಯ ಕಾಂಗ್ರೆಸ್ ನಾಯಕರಿಗೆ ಇದು ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ‌. ತಾಲ್ಲೂಕಿನ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಳುತ್ತಿದ್ದಾರೆ‌ ಎಂದು ತಿಳಿಸಿದರು.‌

ಕಠಳ್ಳಿ ಗ್ರಾಮದಲ್ಲಿ ಜೆಜೆಎಂ ಕಾಮಗಾರಿ ನಡೆಯುತ್ತಿದ್ದು, ನೀರಿನ ಟ್ಯಾಂಕರ್ ಮೇಲೆ ಗುತ್ತೆದಾರ ಅವರು ತಪ್ಪಾಗಿ ಹೊಸ ಟ್ಯಾಂಕ್ ನಿರ್ಮಾಣ ಎಂದು ಬರೆದಿದ್ದಾನೆ. ಇದಕ್ಕೆ ಉದ್ದೇಶ ಪೂರ್ವಕವಾಗಿ ಕಾಂಗ್ರೆಸ್‌ನವರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಬಸವರಾಜ ಹಾಗೂ ಗುತ್ತೆದಾರರ ನಡುವೆ ಜಗಳ ಆಗಿದೆ. ಈ ಸಂಬಂಧ ಪೊಲೀಸರು ಈಗಾಗಲೇ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಗ್ಗೆ ಶೀಘ್ರವೇ ಪ್ರಕರಣದ ಸಂಪೂರ್ಣ ಮಾಹಿತಿ ಪಡೆದು ಬಹಿರಂಗಪಡಿಸುತ್ತೇನೆ ಎಂದರು.

’ಪಟ್ಟಣದಲ್ಲಿ ಸಂಚಾರ ಪೊಲೀಸರು ಉತ್ತಮವಾಗಿ ಕೆಲಸ ಮಾಡುತ್ತಿಲ್ಲ. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಎಲ್ಲೇಂದರಲ್ಲಿ ವಾಹನಗಳು ನಿಲ್ಲುತ್ತಿರುವುದರಿಂದ ಸಂಚಾರ ನಿಯಮ ಉಲ್ಲಂಘನೆ ಆಗುತ್ತಿದೆ.ಈ ಸಮಸ್ಯೆ ಬಗೆಹರಿಸುವುದು ಬಿಟ್ಟು ರೈತರ ಹಾಗೂ ಬಡವರ ವಾಹನಗಳನ್ನು ಹಿಡಿದು ದಂಡ ಹಾಕುತ್ತಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.

ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಮಂಡಲ ವತಿಯಿಂದ ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. 2 ಸಾವಿರ ಜನರು ಸೇರುವ ನಿರೀಕ್ಷೆಯಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಪ್ರಭಾಕರ್ ನಾಗರಾಳೆ ತಿಳಿಸಿದರು.

ಬಸವರಾಜ ಆರ್ಯ, ಕಜೇಂದ್ರ ಕನಕಟಕರ್, ರಾಜು ಭಂಡಾರಿ, ಅನೀಲ ಪಸರ್ಗಿ,‌ ಸಂಜು ವಾಡೇಕರ್ ಸೇರಿದಂತೆ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT