ಬೀದರ್: ‘ಕಾಂಗ್ರೆಸ್ ಪಕ್ಷದ ಶಾಸಕರಿರುವ ಕ್ಷೇತ್ರಗಳಲ್ಲಷ್ಟೇ ರಾಜ್ಯ ಸರ್ಕಾರ ಬರ ಘೋಷಿಸುತ್ತಿದೆ. ಇದು ಸರಿಯಲ್ಲ. ಇದರಿಂದ ರೈತರಿಗೆ ಅನ್ಯಾಯವಾಗುತ್ತದೆ’ ಎಂದು ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ ತಿಳಿಸಿದರು.
ನಗರದಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಇಡೀ ಉತ್ತರ ಕರ್ನಾಟಕದಲ್ಲಿ ಕಳೆದ ಒಂದು ತಿಂಗಳಿಂದ ಮಳೆ ಆಗಿಲ್ಲ. ಇನ್ನೆರಡು ದಿನಗಳಲ್ಲಿ ಇಲ್ಲಿನ ಪರಿಸ್ಥಿತಿಯನ್ನು ಮುಖ್ಯಮಂತ್ರಿ, ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತರುತ್ತೇನೆ. ಜಿಲ್ಲೆಯ ಎಲ್ಲಾ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ಒತ್ತಾಯ ಮಾಡುತ್ತೇನೆ ಎಂದರು.
ರೈತರ ಜೀವನದ ಜೊತೆ ಸರ್ಕಾರ ರಾಜಕೀಯ ಮಾಡಬಾರದು. ಶೀಘ್ರದಲ್ಲೇ ಜಿಲ್ಲೆಯ ಎಲ್ಲಾ ಶಾಸಕರ ನಿಯೋಗ ಬೆಂಗಳೂರಿಗೆ ಹೋಗಿ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡುತ್ತೇವೆ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.