ಮಂಗಳವಾರ, ಮೇ 17, 2022
27 °C
ನಾಗರಿಕ ಪೊಲೀಸ್‌ ಕಾನ್‌ಸ್ಟೆಬಲ್‌ಗಳ ನಿರ್ಗಮನ ಪಥ ಸಂಚಲನ

ವೃತ್ತಿ ಬದುಕಿನಲ್ಲಿ ಶಿಸ್ತು ರೂಢಿಸಿಕೊಳ್ಳಿ: ನಾಗೇಶ ಡಿ.ಎಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ‘ನಾಗರಿಕ ಪೊಲೀಸ್ ಕಾನ್‍ಸ್ಟೆಬಲ್ ತರಬೇತಿ ಪೂರೈಸಿದವರು ವೃತ್ತಿ ಬದುಕಿನಲ್ಲೂ ಶಿಸ್ತು ರೂಢಿಸಿಕೊಳ್ಳಬೇಕು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್. ಸಲಹೆ ನೀಡಿದರು.

ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶುಕ್ರವಾರ ನಡೆದ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆಯ 11ನೇ ತಂಡದ ನಾಗರಿಕ ಪೊಲೀಸ್ ಕಾನ್‍ಸ್ಟೆಬಲ್ ನಿರ್ಗಮನ ಪಥ ಸಂಚಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ನಾಗರಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಪೊಲೀಸ್ ಇಲಾಖೆಯ ಘನತೆ, ಗೌರವ ಕಾಪಾಡಬೇಕು’ ಎಂದು ಹೇಳಿದರು.

‘ಹಿಂದೆ ರಾಜ್ಯದ ಚೆನ್ನಪಟ್ಟಣ, ಖಾನಾಪುರ, ಯಲಹಂಕ ಹಾಗೂ ಬೆಂಗಳೂರಿನಲ್ಲಿ ಮಾತ್ರ ಪೊಲೀಸ್ ತರಬೇತಿ ಶಾಲೆಗಳು ಇದ್ದವು. 1994 ರಲ್ಲಿ ಬೀದರ್‌ನಲ್ಲೂ ಶಾಲೆ ಆರಂಭವಾಗಿದ್ದು, ಈವರೆಗೆ ಏಳು ನಾಗರಿಕ ಪೊಲೀಸ್ ಕಾನ್ಸ್‍ಸ್ಟೆಬಲ್ ಹಾಗೂ ಮೂರು ಸಶಸ್ತ್ರ ಪೊಲೀಸ್ ಕಾನ್‍ಸ್ಟೆಬಲ್ ಬುನಾದಿ ತರಬೇತಿಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ’ ಎಂದು ಡಿವೈಎಸ್ಪಿ ಗೋಪಾಲ್ ಬ್ಯಾಕೋಡ್ ತಿಳಿಸಿದರು.

ಡಿವೈಎಸ್ಪಿ ಬಸವೇಶ್ವರ ಹೀರಾ, ಡಿಎಆರ್ ಡಿವೈಎಸ್‍ಪಿ ಸುನೀಲ್ ಪಿ. ಕೂಡ್ಲಿ ಹಾಗೂ ಶಿವಕುಮಾರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು