ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಸವಕಲ್ಯಾಣ: ‘ಬಂಗಾರದ ಅಕ್ಷರದಲ್ಲಿ ಬರೆದಿಡುವ ಕಾರ್ಯ’

Published 8 ಮಾರ್ಚ್ 2024, 15:59 IST
Last Updated 8 ಮಾರ್ಚ್ 2024, 15:59 IST
ಅಕ್ಷರ ಗಾತ್ರ

ಬಸವಕಲ್ಯಾಣ (ಬೀದರ್‌): ‘ಲಿಂಗಾಯತ ಧರ್ಮ ಮಾನ್ಯತೆಗೆ ಶಿಫಾರಸು ಮಾಡುವ ಮೂಲಕ ಲಿಂಗಾಯತ ಇತಿಹಾಸದಲ್ಲಿ ಬಂಗಾರದ ಅಕ್ಷರದಲ್ಲಿ ಬರೆದಿಡುವ ಕಾರ್ಯ ಮಾಡಿದವರು ಮುಖ್ಯಮಂತ್ರಿ ಸಿದ್ದರಾಮಯ್ಯನವರು’ ಎಂದು ವಿಶ್ವ ಬಸವಧರ್ಮ ವಿಶ್ವಸ್ಥ ಮಂಡಳಿ ಅನುಭವ ಮಂಟಪ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಮೆಚ್ಚುಗೆ ವ್ಯಕ್ತಪಡಿಸಿದರು.

ಇಲ್ಲಿನ ಥೇರ ಮೈದಾನದಲ್ಲಿ ಗುರುವಾರ ಏರ್ಪಡಿಸಿದ್ದ ಮುಖ್ಯಮಂತ್ರಿ ಅಭಿನಂದನಾ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಮೊದಲ ಸಲ ಮುಖ್ಯಮಂತ್ರಿ ಆಗಿದ್ದಾಗ ಬಸವಜಯಂತಿ ದಿನದಂದೇ ಪ್ರಮಾನವಚನ ಸ್ವೀಕರಿಸಿದರು. ಈ ನೆಲದಲ್ಲಿ ಅನುಭವ ಮಂಟಪ ನಿರ್ಮಾಣಕ್ಕೆ ನೀಲನಕ್ಷೆ ರೂಪಿಸಿದರು. ಈಗ ವಚನ ಸಾಹಿತ್ಯ ವಿಶ್ವವಿದ್ಯಾಲಯ ಸ್ಥಾಪಿಸಿ ಅನುಭವ ಮಂಟಪದಂತಹ ಜಡ ಕಟ್ಟಡಕ್ಕೆ ಚೈತನ್ಯ ನೀಡುವುದು ಅಗತ್ಯವಾಗಿದೆ ಎಂದು ಹೇಳಿದರು.

`ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಸಿದ್ದರಾಮಯ್ಯನವರು ಘೋಷಿಸಿ ಎಷ್ಟೋ ದಿನಗಳ ಕನಸು ನನಸು ಮಾಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಅಳವಡಿಸುವುದಕ್ಕೆ ಕ್ರಮ ತೆಗೆದುಕೊಂಡರು. ಮಹಿಳಾ ವಿಶ್ವವಿದ್ಯಾಲಯಕ್ಕೆ ಅಕ್ಕ ಮಹಾದೇವಿ ಹೆಸರಿಟ್ಟರು. ಮಹಾತ್ಮಾ ಗಾಂಧೀಜೀಯವರು ಸಹ ಬೆಳಗಾವಿ ಅಧಿವೇಶನಕ್ಕೆ ಬಂದಾಗ ಬಸವಣ್ಣನವರು ಈಗ ಇರುತ್ತಿದ್ದರೆ ಜಗತ್ತಿಗೆ ಪೂಜ್ಯರು ಆಗಿರುತ್ತಿದ್ದರು. ಅವರ ಅನುಯಾಯಿಗಳು ಬಸವತತ್ವ ಆಚರಿಸಿದರೆ ಜಗತ್ತನ್ನೇ ಬೆಳಗಿಸಬಹುದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು' ಎಂದರು.

’ಉತ್ತರ ಭಾರತದ ಸಂತರ, ಸತ್ಪುರುಷರ ಬಗ್ಗೆ ಇಲ್ಲಿನ ಪಠ್ಯದಲ್ಲಿ ಮಾಹಿತಿ ಇದೆ. ಆದರೆ, ಅದೇ ಆ ರಾಜ್ಯಗಳಲ್ಲಿನ ಶಾಲಾ ಪಠ್ಯದಲ್ಲಿ ಬಸವಣ್ಣನವರ, ಅಕ್ಕ ಮಹಾದೇವಿ, ಕನಕದಾಸ, ಸಂಗೊಳ್ಳಿ ರಾಯಣ್ಣನವರ ಕುರಿತು ಮಾಹಿತಿ ದೊರಕುವಂತೆ ಮಾಡಬೇಕಾಗಿದೆ. ಆ ನಿಟ್ಟಿನಲ್ಲಿ ಮುಖ್ಯಮಂತ್ರಿ ಕ್ರಮ ಜರುಗಿಸಬೇಕು' ಎಂದು ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT