ಮಂಗಳವಾರ, ಡಿಸೆಂಬರ್ 7, 2021
20 °C

ಬೀದರ್ ಜಿಲ್ಲಾ ಪಂಚಾಯಿತಿ ಸಿಇಒ ಮೇಲೆ ಪಿಡಿಓ ಇಂದಲೇ ಹಲ್ಲೆ ಯತ್ನ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳ ಸಭೆ ನಡೆಸುತ್ತಿದ್ದ ಜಿಲ್ಲಾ ಪಂಚಾಯಿತಿ ಸಿಇಒ ಜಹೀರಾ ನಸೀಮ್‌ ಮೇಲೆ ಪಿಡಿಒ ಮಂಗಲಾ ಮಂಗಳವಾರ ಹಲ್ಲೆಗೆ ಯತ್ನಿಸಿದ್ದಾರೆ ಎಂದು ಪ್ರಕರಣ ದಾಖಲಾಗಿದೆ.

‘ಮಂಗಳವಾರ ಸಂಜೆ 4ಕ್ಕೆ ಅಧಿಕಾರಿಗಳ ಸಭೆ ನಡೆಸುತ್ತಿದ್ದಾಗ ಪೊಲೀಸ್‌ ಕಾನ್‌ಸ್ಟೆಬಲ್‌ಗಳ ಕಣ್ಣು ತಪ್ಪಿಸಿ ಒಳಗೆ ಬಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಗಲಾ ಕಾಂಬಳೆ, ನನ್ನ ಮೇಲೆ ಹಠಾತ್‌ ಹಲ್ಲೆ ಮಾಡಲು ಯತ್ನಿಸಿದರು. ಈ ಸಂದರ್ಭದಲ್ಲಿ ನನ್ನ ಕೈಬೆರಳಿಗೆ ಸ್ವಲ್ಪ ಗಾಯವಾಗಿದೆ’ ಎಂದು ಸಿಇಒ ಜಹೀರಾ ನಸೀಮ್‌ ಪೊಲೀಸರಿಗೆ ದೂರು ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.