ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಸ್ಕ್ ಧರಿಸದ 30 ಮಂದಿಗೆ ದಂಡ

ಕೋವಿಡ್ ತಡೆಗೆ ಮುಂದಾದ ಮನ್ನಳ್ಳಿ ಗ್ರಾಮ ಪಂಚಾಯಿತಿ
Last Updated 23 ಏಪ್ರಿಲ್ 2021, 4:57 IST
ಅಕ್ಷರ ಗಾತ್ರ

ಮನ್ನಳ್ಳಿ (ಜನವಾಡ): ಬೀದರ್ ತಾಲ್ಲೂಕಿನ ಮನ್ನಳ್ಳಿ ಗ್ರಾಮ ಪಂಚಾಯಿತಿಯು ಕೋವಿಡ್ ಸೋಂಕು ತಡೆಗೆ ಮುಂದಾಗಿದೆ.

ಚುನಾಯಿತ ಪ್ರತಿನಿಧಿಗಳು, ಸಂಘ– ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರ ಸಲಹೆ ಆಧರಿಸಿ, ಕೋವಿಡ್ ಸೋಂಕಿನ ಜಾಗೃತಿ, ನಿಯಮಗಳ ಪಾಲನೆಗೆ ಅಂಗಡಿಗಳಿಗೆ ನೋಟಿಸ್, ಮಾಸ್ಕ್ ಧರಿಸದವರಿಗೆ ದಂಡ ಮೊದಲಾದ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಪಂಚಾಯಿತಿ ಅಧ್ಯಕ್ಷ ಅಲ್ಲಾವುದ್ದಿನ್ ಮೈನೊದ್ದಿನ್, ಸದಸ್ಯ ರಾಜಕುಮಾರ ಮಡಕಿ, ಹಣಮಂತ ವೀರಣ್ಣ, ಅಭಿವೃದ್ಧಿ ಅಧಿಕಾರಿ ಸವಿತಾ ಹಿರೇಮಠ ಹಾಗೂ ಸಿಬ್ಬಂದಿ ಪೊಲೀಸ್ ಸಿಬ್ಬಂದಿಯೊಂದಿಗೆ ಗುರುವಾರ ಮನ್ನಳ್ಳಿ ಗ್ರಾಮದಲ್ಲಿ ಸಂಚರಿಸಿ ಕೋವಿಡ್ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.

ವಾಹನ ಸವಾರರು, ಸಾರ್ವಜನಿಕರು ಸೇರಿ ಮಾಸ್ಕ್ ಧರಿಸದ ಒಟ್ಟು 30 ಮಂದಿಗೆ ತಲಾ ₹100 ದಂಡ ವಿಧಿಸಿದರು. ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕಿರಾಣಿ, ಹೋಟೆಲ್, ಬಟ್ಟೆ ಅಂಗಡಿ ಸೇರಿದಂತೆ 25 ಅಂಗಡಿಗಳ ಮಾಲೀಕರಿಗೆ ನೋಟಿಸ್ ನೀಡಿದರು.

ಕೋವಿಡ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಲೇ ಇದೆ. ಹೀಗಾಗಿ ಸಾರ್ವಜನಿಕರು ಹೆಚ್ಚು ಜಾಗೃತಿ ವಹಿಸುವ ಅಗತ್ಯ ಇದೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸವಿತಾ ಹಿರೇಮಠ ಹೇಳಿದರು.

ಕೋವಿಡ್ ಸೋಂಕು ನಿಯಂತ್ರಣ ಸಂಬಂಧ ಪಂಚಾಯಿತಿಯಲ್ಲಿ ಚುನಾಯಿತ ಪ್ರತಿನಿಧಿಗಳು, ಸಂಘ– ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಗ್ರಾಮದ ಪ್ರಮುಖರ ಸಭೆ ನಡೆಸಲಾಗಿದೆ. ಅದರಲ್ಲಿ ಬಂದ ಸಲಹೆಗಳ ಮೇರೆಗೆ ಸೋಂಕಿನ ನಿಯಂತ್ರಣಕ್ಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಮಾಸ್ಕ್ ಧರಿಸದವ ರಿಗೆ ದಂಡ ವಿಧಿಸುವ ಪ್ರಕ್ರಿಯೆ ಮುಂದು ವರಿಯಲಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT