ಶುಕ್ರವಾರ, ಮೇ 14, 2021
32 °C

ಹುಮನಾಬಾದ್: ಮಾಸ್ಕ್ ಧರಿಸದವರಿಗೆ ದಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಮನಾಬಾದ್: ಸಳ್ಥೀಯ ಪುರಸಭೆ ವತಿಯಿಂದ ಪಟ್ಟಣದಲ್ಲಿ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದೆ.

ಪಟ್ಟಣದ ಪ್ರಮುಖ ರಸ್ತೆಗಳಾದ ಅಂಬೇಡ್ಕರ್‌ ವೃತ್ತ, ಹಳೇ ತಹಶೀಲ್ ಕಚೇರಿ, ರಾಮಚಂದ್ರಪ್ಪ ಮೌಲಿ ವೃತಗಳಲ್ಲಿ ಪುರಸಭೆ ಅಧಿಕಾರಿಗಳು ನಿಂತುಕೊಂಡು ಮಾಸ್ಕ್‌ ಧರಿಸದೆ ಸಂಚರಿಸುವ ಪ್ರಯಾಣಿಕರಿಗೆ ಕೋವಿಡ್ ಜಾಗೃತಿ ಮೂಡಿಸುವ ಜತೆಗೆ ದಂಡ ವಸೂಲಿ ಮಾಡುತ್ತಿದ್ದಾರೆ.

ಅಂಗಡಿ ಮಾಲೀಕರಿಗೆ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು ಹಾಗೂ ಗ್ರಾಹಕರಿಗೂ ಮಾಸ್ಕ್‌ ಧರಿಸುವಂತೆ ಮಾಹಿತಿ ನೀಡಬೇಕು. ತಪ್ಪಿದಲ್ಲಿ ಅಂಗಡಿ ಮಾಲೀಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

‘ಪಟ್ಟಣದಲ್ಲಿ ಕಳೆದ ಎರಡು ದಿನಗಳಲ್ಲಿ ಮಾಸ್ಕ್‌ ಧರಿಸದ ವ್ಯಕ್ತಿಗಳಿಗೆ ₹100 ಗಳಂತೆ ದಂಡ ವಿಧಿಸಲಾಗಿದೆ. ಒಟ್ಟು 70 ನಾಗರಿಕರಿಂದ 7 ಸಾವಿರ ದಂಡ ವಸೂಲಿ ಮಾಡಲಾಗಿದೆ ಹಾಗೂ ಕೋವಿಡ್ ಜಾಗೃತಿ ತಿಳಿವಳಿಕೆ ಮೂಡಿಸಲಾಗಿದೆ’ ಎಂದು ಪುರಸಭೆ ಆರೋಗ್ಯ ನಿರೀಕ್ಷಕ ಮಹಮ್ಮದ್ ಸಲೀಮ್ ತಿಳಿಸಿದರು.

‘ಜಿಲ್ಲೆಯಲ್ಲಿ ದಿನೇದಿನೇ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ನಾವು ಸುರಕ್ಷತೆಯೊಂದಿಗೆ ಇತರರಿಗೂ ಸುರಕ್ಷತೆಯಿಂದ ಇರಲು ತಿಳಿಸಬೇಕು. ಸಾರ್ವಜನಿಕರು ಮನೆಯಿಂದ ಹೊರಬರುವಾಗ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು’ ಎಂದು ಪುರಸಭೆ ಮುಖ್ಯಾಧಿಕಾರಿ ಶಂಭುಲಿಂಗ ದೇಸಾಯಿ ಮನವಿ ಮಾಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು