ಸೋಮವಾರ, ಅಕ್ಟೋಬರ್ 26, 2020
20 °C

ಮಾಸ್ಕ್‌ ಧರಿಸದವರಿಗೆ ದಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಮನಾಬಾದ್: ಕೊರೊನಾ ವೈರಾಣು ಹರಡದಂತೆ ತಡೆಯಲು ಸಾರ್ವಜನಿಕರ ಮುಂಜಾಗ್ರತೆ ವಹಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಶಂಭುಲಿಂಗ ದೇಸಾಯಿ ಹೇಳಿದರು.

ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತ, ಸರ್ದಾರ್‌ ಪಟೇಲ್‌ ವೃತ್ತ, ಬಸವೇಶ್ವರ ವೃತ್ತ ಸೇರಿದಂತೆ ಪ್ರಮುಖ ರಸ್ತೆ ಪಕ್ಕದ ಅಂಗಡಿಗಳಿಗೆ ಶುಕ್ರವಾರ ತೆರಳಿ ಮಾಸ್ಕ್ ಧರಿಸದವರಿಗೆ ದಂಡ ವಿಧಿಸಿದ ಬಳಿಕ ಅವರು ಮಾತನಾಡಿದರು.

ಜನರ ಆರೋಗ್ಯ ಹಿತದೃಷ್ಟಿಯಿಂದ ಮತ್ತು ಕೊರೊನಾ ಹರಡದಂತೆ ತಡೆಗಟ್ಟಲು ರಾಜ್ಯ ಸರ್ಕಾರ ಕೈಗೊಂಡ ಮಾರ್ಗಸೂಚಿಯನ್ನು ಎಲ್ಲರು ಕಡ್ಡಾಯವಾಗಿ ಪಾಲಿಸಬೇಕು, ಮಾಸ್ಕ್ ಧರಿಸದವರಿಗೆ ನಿಯಮದಂತೆ ದಂಡ ವಿಧಿಸಲಾಗುವುದು ಎಂದು ತಿಳಿಸಿದರು.

ಪಟ್ಟಣದ ವಿವಿಧ ಅಂಗಡಿ, ದ್ವಿಚಕ್ರ ಮತ್ತು ತ್ರಿಚಕ್ರ ವಾಹನ ಸವಾರರು ಸೇರಿದಂತೆ ಜನರು ಕೂಡ ಮಾಸ್ಕ್ ಧರಿಸದೆ ಮನೆಯಿಂದ ಬಂದ ಕಾರಣ ದಂಡ ವಿಧಸಲಾಗುತ್ತಿದೆ. ನಿಮ್ಮೆಲ್ಲರ ಸುರಕ್ಷೆತೆಗಾಗಿ ಮಾಸ್ಕ್ ಧರಿಸುವುದು ಕಡ್ಡಾಯ ಮಾಡಿರುವುದರಿಂದ ಸಾರ್ವಜನಿಕರು ಮನೆಯಿಂದ ಹೊರಗಡೆ ಬರುವ ಮುಂಚೆ ಮಾಸ್ಕ್ ಧರಿಸಿಕೊಂಡು ಬರುವುದು ರೂಢಿಸಿಕೊಳ್ಳಬೇಕು ಎಂದರು.

ಪುರಸಭೆ ಕಂದಾಯ ನಿರೀಕ್ಷಕ ದತ್ತಾತ್ರೇಯ, ಆರೋಗ್ಯ ನಿರೀಕ್ಷಕ ಶಾಮಲಾಲ ಗಾಯಕವಾಡ, ಮಹಮದ್ ಸಮಿಮ್, ರೇವಣಸಿದ್ದ, ಸಂಜುಕುಮಾರ, ಪ್ರಕಾಶ ನಾಗರೆ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.