ಭಾಲ್ಕಿ: ಇಲ್ಲಿಯ ಪುರಭವನದಲ್ಲಿ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ಬಳಿ ನಾಗರಿಕರು ವಿವಿಧ ಸಮಸ್ಯೆಗಳ ಮಹಾಪೂರವೇ ಹರಿಸಿದರು.
ರೈತ ಸಂಘದವರು ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ರೈತರಿಂದ ಸನ್ಮಾನ ಸ್ವೀಕರಿಸಿದ ಸಚಿವರಿಗೆ, ರೈತ ಮುಖಂಡರು, ನಿರುದ್ಯೋಗಿ ಯುವಕರು, ಶಿಕ್ಷಕ ಹುದ್ದೆಗೆ ಆಯ್ಕೆಯಾಗಿ ನೇಮಕಾತಿ ಆದೇಶ ಪಡೆಯದೆ ಇರುವರು, ಕೆಪಿಟಿಸಿಎಲ್ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವುದು ಸೇರಿದಂತೆ ಸರ್ಕಾರದ ಮಟ್ಟದಲ್ಲಿರುವ ಉದ್ಯೋಗ ಸಮಸ್ಯೆಗಳನ್ನು ಮತ್ತು ನೇಮಕಾತಿ ಪ್ರಕ್ರಿಯೆಗಳನ್ನು ಇತ್ಯರ್ಥಪಡಿಸುವ ಬಗ್ಗೆ ಸಂಬಂಧಪಟ್ಟ ವ್ಯಕ್ತಿಗಳು ಆಗಮಿಸಿ ಮನವಿ ಪತ್ರ ಸಲ್ಲಿಸುವುದರೊಂದಿಗೆ ತಮ್ಮ ಸಮಸ್ಯೆಗಳನ್ನು ಸಚಿವರ ಹತ್ತಿರ ಹೇಳಿಕೊಂಡರು.
ಇದಕ್ಕೆ ಉತ್ತರವಾಗಿ ಮಾತನಾಡಿದ ಸಚಿವರು, ಹಿಂದಿನ ಸರ್ಕಾರದಲ್ಲಿ ಆದ ಕೆಲವು ಲೋಪಗಳಿಂದ ಈ ಸಮಸ್ಯೆಗಳು ಉಳಿದುಕೊಂಡಿವೆ. ನಮ್ಮ ಸರ್ಕಾರದಿಂದ ಶೀಘ್ರದಲ್ಲಿಯೇ ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸುತ್ತೇವೆ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.