ಬುಧವಾರ, ಮಾರ್ಚ್ 3, 2021
30 °C

ದೈಹಿಕ, ಮಾನಸಿಕ ಸದೃಢತೆ: ಯುವಕರಿಗೆ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ದೈಹಿಕ ಹಾಗೂ ಮಾನಸಿಕ ಸದೃಢತೆಯಿಂದ ಯುವಕರು ಶಕ್ತಿಶಾಲಿಯಾಗಿ ಹೊರ ಹೊಮ್ಮಲು ಸಾಧ್ಯವಿದೆ ಎಂದು ಗ್ಲೋಬಲ್ ಸೈನಿಕ ಅಕಾಡೆಮಿ ಅಧ್ಯಕ್ಷ ಕರ್ನಲ್ ಶರಣಪ್ಪ ಸಿನಕೇನಪುರೆ ಅಭಿಪ್ರಾಯಪಟ್ಟರು.

ನಗರದ ಒಳಾಂಗಣ ಕ್ರೀಡಾಂಗಣದ ಆವರಣದಲ್ಲಿ ನಡೆದ ರಾಷ್ಟ್ರೀಯ ಯುವ ಸಪ್ತಾಹ ಹಾಗೂ ಸೇನಾ ತರಬೇತಿ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಸೈನಿಕ ಹುದ್ದೆ ಅದೊಂದು ಹುದ್ದೆ ಮಾತ್ರ ಆಗಿರದೆ, ದೇಶವನ್ನು ಸಂರಕ್ಷಿಸುವ ಮಹತ್ವದ ಜವಾಬ್ದಾರಿಯಾಗಿದೆ. ಯುವಕರು ಸೇನೆಗೆ ಸೇರಬೇಕು. ರಾಷ್ಟ್ರಪ್ರೇಮ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಕೇಂದ್ರ ಜಾಗೃತಿ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯ ಶಿವಯ್ಯ ಸ್ವಾಮಿ, ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತ ಓಂಪ್ರಕಾಶ ರೊಟ್ಟೆ, ಪ್ರಭುಲಿಂಗ ಬಿರಾದಾರ, ರಾಜ್ಯ ಪ್ರಶಸ್ತಿ ಪುರಸ್ಕೃತ ಮೌಲಪ್ಪ ಮಾಳಗೆ, ಬಿವಿಬಿ ಕಾಲೇಜು ಎನ್‍ಸಿಸಿ ಅಧಿಕಾರಿ ಡಾ. ಪಿ. ವಿಠ್ಠಲರೆಡ್ಡಿ ಮಾತನಾಡಿದರು.

ಸೈನಿಕ ತರಬೇತುದಾರ ಅಶೋಕ ಪಾಟೀಲ, ಸಚಿನ್ ಪತಂಗಡೆ, ಶಿವಕುಮಾರ ಗಡ್ಡೆ ಉಪಸ್ಥಿತರಿದ್ದರು. ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಅಧ್ಯಕ್ಷತೆ ವಹಿಸಿದ್ದರು.

ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ನೆಹರೂ ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಾಧಿಕಾರಿ ಮಯೂರಕುಮಾರ ಗೋರ್ಮೆ ಸಪ್ತಾಹದ ವರದಿ ವಾಚಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಆರ್.ಜಿ. ನಾಡಗೀರ ಸ್ವಾಗತಿಸಿದರು. ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಶಿವಕುಮಾರ ಸ್ವಾಮಿ ವಂದಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.