ಗುರುವಾರ , ಸೆಪ್ಟೆಂಬರ್ 23, 2021
21 °C

ಬೀದರ್‌ ಜಿಲ್ಲೆಯ ಅಭಿವೃದ್ಧಿಗೆ ಯೋಜನೆ: ಸಚಿವ ಪ್ರಭು ಚವಾಣ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ಔರಾದ್‌ನವರೇ ಆದ ಕೇಂದ್ರ ಸಚಿವ ಭಗವಂತ ಖೂಬಾ ಹಾಗೂ ನಾನು ಇಬ್ಬರು ಸೇರಿಕೊಂಡು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸುತ್ತೇವೆ’ ಎಂದು ಸಚಿವ ಪ್ರಭು ಚವಾಣ್‌ ಹೇಳಿದರು.

ಎರಡನೇ ಬಾರಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ ಬೀದರ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

ಕೋವಿಡ್‌ ಮೂರನೇ ಅಲೆ ತಡೆಯಲು ಕಟ್ಟುನಿಟ್ಟಿನ ಕ್ರಮಕೈಗೊಳ್ಳುವುದು ನನ್ನ ಮೊದಲ ಆದ್ಯತೆ. ಈ ದಿಸೆಯಲ್ಲಿ ಶನಿವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿಲ್ಲ, ಖಾತೆಗಾಗಿಯೂ ಮುಖಂಡರ ಮೇಲೆ ಒತ್ತಡ ಹಾಕುವುದಿಲ್ಲ. ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ. ಪಶು ಸಂಗೋಪನೆ ಖಾತೆ ನೀಡಿದರೆ ಇಲಾಖೆಯಲ್ಲಿ ಬಾಕಿ ಉಳಿದ ಕೆಲಸಗಳನ್ನು ಪೂರ್ಣಗೊಳಿಸಲು ಅನುಕೂಲವಾಗಲಿದೆ. ಪಶು ಸಂಗೋಪನೆ ಖಾತೆಯೇ ಸಿಗುವ ನಿರೀಕ್ಷೆ ಇದೆ ಎಂದು ಹೇಳಿದರು.

ಎರಡನೇ ಬಾರಿ ಸಚಿವನಾಗಲು ಅವಕಾಶ ಕಲ್ಪಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಕ್ಷದ ಮುಖಂಡರಾದ ಅಮಿತ್ ಶಾ, ಜೆ.ಪಿ.ನಡ್ಡಾ, ಬಿ.ಎಸ್‌.ಯಡಿಯೂರಪ್ಪ, ನಳಿನಕುಮಾರ ಕಟೀಲ್ ಅವರಿಗೆ ಕೃತಜ್ಞನಾಗಿದ್ದೇನೆ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.