ಗುರುವಾರ , ಮೇ 19, 2022
20 °C
ಅಧಿಕಾರಿಗಳ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ಆಕ್ರೋಶ

ರಸ್ತೆಯಲ್ಲಿ ಸಸಿ ನೆಟ್ಟು ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಇಲ್ಲಿಯ ಬೊಮ್ಮಗೊಂಡೇಶ್ವರ ವೃತ್ತ ಸಮೀಪದ ರಸ್ತೆಯಲ್ಲಿ ಸೃಷ್ಟಿಯಾದ ಗುಂಡಿಯಲ್ಲಿ ಸಸಿ ನೆಡುವ ಮೂಲಕ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಗುರುವಾರ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಹೃದಯ ಭಾಗದಲ್ಲಿ ಇರುವ ರಸ್ತೆಯಲ್ಲಿ ತಗ್ಗು ನಿರ್ಮಾಣಗೊಂಡ ಕಾರಣ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಅನೇಕರು ಬಿದ್ದು ಗಾಯಗೊಂಡ ಉದಾಹರಣೆಗಳೂ ಇವೆ. ಆದಾಗಿಯೂ ಸಂಬಂಧಪಟ್ಟವರು ಗಮನಹರಿಸದ ಕಾರಣ ಸಸಿ ನೆಟ್ಟು ಪ್ರತಿಭಟನೆ ನಡೆಸಲಾಗಿದೆ ಎಂದು ಪ್ರತಿಭಟನೆಯ ಮುಂದಾಳತ್ವ ವಹಿಸಿದ್ದ ವೇದಿಕೆಯ ಭಾಲ್ಕಿ ತಾಲ್ಲೂಕು ಘಟಕದ ಅಧ್ಯಕ್ಷ ಗಣೇಶ ಪಾಟೀಲ ತಿಳಿಸಿದರು.

ವೇದಿಕೆಯ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಗೋಪಾಲ್ ಕುಲಕರ್ಣಿ, ಬಸವಕಲ್ಯಾಣ ತಾಲ್ಲೂಕು ಘಟಕದ ಅಧ್ಯಕ್ಷ ಸಂಜು ಯಾದವ್, ಮಾಹಿತಿ ಹಕ್ಕು ಕಾರ್ಯಕರ್ತರ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ದಿಲೀಪ್ ದೊಡ್ಡಮನಿ, ಮಾನವ ಹಕ್ಕುಗಳ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಖಂಡಪ್ಪ ಪಾತರಪಳ್ಳಿ, ಭಾಲ್ಕಿ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಗಿರೀಶ ಬಿರಾದಾರ, ಕಿರಣ ಪಾಟೀಲ, ಮಾರುತಿ ಹಾರಕೂಡೆ, ಅಮರ ಚಂದ್ರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.