7

ಔರಾದ್: ಪ್ಲಾಸ್ಟಿಕ್ ಚೀಲ ಜಪ್ತಿ

Published:
Updated:
ಔರಾದ್ ತಾಲ್ಲೂಕಿನ ಸಂತಪುರದ ಅಂಗಡಿಯೊಂದರ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ಈಚೆಗೆ ದಾಳಿ ನಡೆಸಿ ಪ್ಲಾಸ್ಟಿಕ್ ಚೀಲ ವಶಪಡಿಸಿಕೊಂಡರು

ಔರಾದ್: ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಈಚೆಗೆ ತಾಲ್ಲೂಕಿನ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿ, ಪ್ಲಾಸ್ಟಿಕ್ ಚೀಲಗಳನ್ನು ವಶಪಡಿಸಿಕೊಂಡಿದ್ದಾರೆ.

ಸಂತಪುರದ ಎರಡು ಅಂಗಡಿಗಳಲ್ಲಿ ಪ್ಲಾಸ್ಟಿಕ್ ಚೀಲ ಪತ್ತೆಯಾಗಿದ್ದು, ಮಾಲೀಕರಿಗೆ ನೋಟಿಸ್ ನೀಡಲಾಗಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಹೇಶ ಬಿರಾದಾರ ಹೇಳಿದರು. ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿಷೇಧಿಸಿ ಜೂನ್ 19ರಂದು ಆದೇಶ ಹೊರಡಿಸಲಾಗಿದೆ. ಎಲ್ಲರೂ ಆದೇಶವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.

ಉಪ ತಹಶೀಲ್ದಾರ್ ರಮೇಶ ಪಾಂಚಾಳ, ಎಸ್ಐ ಕಾಶಿನಾಥ, ಕಂದಾಯ ನಿರೀಕ್ಷಕ ಬಾಲಾಜಿ, ಗ್ರಾಮ ಲೆಕ್ಕಿಗ ಅನ್ವರ ಜಕಾತಿ ಇದ್ದರು.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !