ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್ | ಇಂದು ಪ್ರಧಾನಿ ಮೋದಿಯಿಂದ ಎಫ್‌.ಎಂ. ಕೇಂದ್ರ ಉದ್ಘಾಟನೆ

Published 19 ಜನವರಿ 2024, 4:08 IST
Last Updated 19 ಜನವರಿ 2024, 4:08 IST
ಅಕ್ಷರ ಗಾತ್ರ

ಬೀದರ್‌: ‘ಜಿಲ್ಲೆಯ ನೂತನ ಆಕಾಶವಾಣಿ ಎಫ್‌.ಎಂ. ಕೇಂದ್ರವನ್ನು ಪ್ರಧಾನಿ ನರೇಂದ್ರ ಮೋದಿಯವರು ಜ.19ರ ಸಂಜೆ 5ಕ್ಕೆ ವರ್ಚುವಲ್‌ ಮೂಲಕ ಉದ್ಘಾಟಿಸಲಿದ್ದಾರೆ’ ಎಂದು ಕೇಂದ್ರ ರಾಸಾಯನಿಕ, ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ.

ನಗರದ ದೂರದರ್ಶನ ಕೇಂದ್ರದಲ್ಲಿ 100 ವ್ಯಾಟ್‌ ಸಾಮರ್ಥ್ಯದ ಎಫ್‌.ಎಂ. ಕೇಂದ್ರ ತಲೆ ಎತ್ತಲಿದೆ. ಸದ್ಯ ಕೇಂದ್ರವು ಮರುಪ್ರಸಾರ ಕೇಂದ್ರವಾಗಿ ಕೆಲಸ ನಿರ್ವಹಿಸಲಿದೆ. 

ಬೀದರ್‌ನಲ್ಲಿರುವ ದೂರದರ್ಶನ ಕೇಂದ್ರದಲ್ಲಿ 100 ವ್ಯಾಟ್ ಸಾಮರ್ಥ್ಯವುಳ್ಳ ಎಫ್.ಎಂ. ಕೇಂದ್ರ ಇದಾಗಿದ್ದು, ಈ ಕೇಂದ್ರವು ಸದ್ಯ ಮರುಪ್ರಸಾರಣ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ. ಶುಕ್ರವಾರ ಆಕಾಶವಾಣಿ ಕೇಂದ್ರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಭಾಗವಹಿಸಿ, ಯಶಸ್ವಿಗೊಳಿಸಬೇಕು ಎಂದು ಸಚಿವ ಖೂಬಾ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT