ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೋಲಿಯೊ ಲಸಿಕೆ ಜಾಗೃತಿಗೆ ವಾಹನಗಳ ರ್‍ಯಾಲಿ

ಜಿಲ್ಲೆಯ 1,99,491 ಮಕ್ಕಳಿಗೆ ಲಸಿಕೆ ಹಾಕುವ ಗುರಿ: ಜಿಲ್ಲಾ ಆರೋಗ್ಯಾಧಿಕಾರಿ ವೀರಣ್ಣಾ
Last Updated 19 ಜನವರಿ 2020, 10:51 IST
ಅಕ್ಷರ ಗಾತ್ರ

ಬೀದರ್‌: ‘ಜಿಲ್ಲೆಯಾದ್ಯಂತ ಜ.19ರಿಂದ 22ರವರೆಗೆ ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದ ಪ್ರಯುಕ್ತ ನಗರದಲ್ಲಿ ಶನಿವಾರ ವಾಹನಗಳ ರ್‍ಯಾಲಿ ನಡೆಸಲಾಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೀರಣ್ಣಾ.ಜಿ.ರೆಡ್ಡಿ ಮಾತನಾಡಿ, ‘ಜ.19ರಂದು ಬೂತ್ ಮಟ್ಟದಲ್ಲಿ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಕಾರ್ಯಕ್ರಮ ನಡೆಯಲಿದೆ. ಜ.20ರಿಂದ 22ರವರೆಗೆ ಮನೆ ಮನೆಗೆ ಭೇಟಿ ನೀಡಿ ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೋಲಿಯೊ ಲಸಿಕೆ ನೀಡಲಾಗುತ್ತದೆ. ಪೋಷಕರು ತಮ್ಮ ಮಕ್ಕಳನ್ನು ಹತ್ತಿರದ ಬೂತ್‍ಗೆ ಕರೆದೊಯ್ದು ಲಸಿಕೆ ಹಾಕಿಸಬೇಕು’ ಎಂದು ಮನವಿ
ಮಾಡಿದರು.

‘ಜಿಲ್ಲೆಯಲ್ಲಿ 1,99,491 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಒಟ್ಟು 933 ಬೂತ್‍ಗಳು, 66 ಟ್ರಾನ್ಸಿಸ್ಟ್ ಪಾಯಿಂಟ್‍ಗಳು ಹಾಗೂ 7 ಮೊಬೈಲ್ ತಂಡಗಳನ್ನು ರಚಿಸಲಾಗಿದೆ. ಒಟ್ಟು 2018 ಸಿಬ್ಬಂದಿ, 201 ಮೇಲ್ವಿಚಾರಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, 12,212 ವೈಲ್‍ಗಳು ಬಳಕೆಯಾಗಲಿವೆ’ ಎಂದು ತಿಳಿಸಿದರು.

‘ಪಕ್ಕದ ರಾಷ್ಟ್ರಗಳಲ್ಲಿ ಪೋಲಿಯೊ ವೈರಾಣು ಇರುವುದರಿಂದ ರೋಗನಿರೋಧಕ ಶಕ್ತಿ ಉಳಿಸಿಕೊಳ್ಳುವ ಸಲುವಾಗಿ ಸಾರ್ವಜನಿಕರು ತಮ್ಮ ಮಕ್ಕಳಿಗೆ ಎಷ್ಟೇ ಬಾರಿ ಪೋಲಿಯೊ ಲಸಿಕೆ ಹಾಕಿಸಿದರೂ ಜ.19ರಂದು ತಪ್ಪದೆ ಪೋಲಿಯೊ ಹನಿ ಹಾಕಿಸಬೇಕು’ ಎಂದು ಹೇಳಿದರು.

ಜಿಲ್ಲಾ ಆರ್.ಸಿ.ಎಚ್.ಅಧಿಕಾರಿ ಡಾ.ರವೀಂದ್ರ ಸಿರಸಗಿ, ಎನ್.ವಿ.ಬಿ.ಡಿಸಿ.ಪಿ ಅಧಿಕಾರಿ ಡಾ.ಅನಿಲ ಚಿಂತಾಮಣಿ, ಜಿಲ್ಲಾ ಕುಷ್ಠರೋಗ ನಿಯಂತ್ರಣ ಅಧಿಕಾರಿ ಡಾ.ರಾಜಶೇಖರ ಪಾಟೀಲ, ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ.ದೀಪಾ ಖಂಡ್ರೆ, ಸಹಾಯಕ ಆಡಳಿತ ಅಧಿಕಾರಿ ಅನುಸೂಯಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸಂಗಪ್ಪ ಕಾಂಬಳೆ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶ್ರಾವಣ ಜಾಧವ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಉಮೇಶ ಬಿರಾದಾರ್, ಲಸಿಕಾ ಕಾರ್ಯಕ್ರಮ ಮೇಲ್ವಿಚಾರಕ ಶಿವಶಂಕರ, ಅಶೋಕ, ವೀರಶೆಟ್ಟಿ ಚನ್ನಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT