ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ಕಾಮಗಾರಿ ಕಳಪೆ: ಪ್ರತಿಭಟನೆ

Last Updated 8 ಮಾರ್ಚ್ 2018, 9:52 IST
ಅಕ್ಷರ ಗಾತ್ರ

ಕುಶಾಲನಗರ: ಇಲ್ಲಿನ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮಾರುಕಟ್ಟೆ ರಸ್ತೆ, ಟೌನ್ ಕಾಲೊನಿಯಲ್ಲಿ ಕೈಗೊಂಡಿರುವ ಕಾಂಕ್ರೀಟ್ ರಸ್ತೆ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಆರೋಪಿಸಿ ಬುಧವಾರ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ತಿಂಗಳ ಹಿಂದೆ ₹ 25 ಲಕ್ಷ ವೆಚ್ಚದಲ್ಲಿ ಕೈಗೊಂಡಿದ್ದ ಕಾಂಕ್ರೀಟ್ ರಸ್ತೆ ಕಾಮಗಾರಿ ಬಿರುಕು ಬಿಟ್ಟು ಹಾಳಾಗಿದೆ. ಇದರಿಂದ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ ಎಂದು ಗ್ರಾಮದ ಮುಖಂಡ ಮಹಾದೇವ್ ಆರೋಪಿಸಿದರು.

ಆರಂಭದಲ್ಲಿಯೇ ರಸ್ತೆ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಆದರೆ, ಈಗ ಸಂಪೂರ್ಣ ಹಾನಿಯಾಗಿದೆ. ವಾಹನ ಸಂಚಾರದಿಂದ ಕಾಂಕ್ರೀಟ್ ತುಂಡು ತುಂಡಾಗಿ ಮೇಲೇಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ರಸ್ತೆ ನಿರ್ಮಾಣ ಮಾಡಿದ ಗುತ್ತಿಗೆದಾರರ ಮೇಲೆ ಕ್ರಮ ಕೈಗೊಳ್ಳಬೇಕು. ರಸ್ತೆ ದುರಸ್ತಿಗೆ ಕೂಡಲೇ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಇಲ್ಲದೇ ಹೋದರೆ ಪ್ರತಿಭಟನೆ ತೀವ್ರಗೊಳಿಸಬೇಕಾಗುತ್ತದೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದರು.

ಮುಖಂಡರಾದ ಕುಮಾರ್, ಪ್ರಸಾದ್, ಮಹಮ್ಮದ್, ಇಸ್ಮಾಯಿಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT