ಗುರುವಾರ , ಜುಲೈ 16, 2020
24 °C

ಚಿಟಗುಪ್ಪ | ಸಿಪಿಐ, ಇಬ್ಬರು ಪಿಎಸ್‌ಐ ಸೇರಿ 15 ಪೊಲೀಸರು ಹೋಮ್ ಕ್ವಾರಂಟೈನ್‌ಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಟಗುಪ್ಪ (ಬೀದರ್ ಜಿಲ್ಲೆ): ಜೂಜಾಟ ಅಡ್ಡೆ ಮೇಲೆ ದಾಳಿ ವೇಳೆ ಕೋವಿಡ್ 19 ಸೋಂಕಿತರರ  ದ್ವಿತೀಯ ಸಂಪರ್ಕಕ್ಕೆ ಬಂದಿದ್ದ ಚಿಟಗುಪ್ಪ ಠಾಣೆಯ  ಸಿಪಿಐ ಮತ್ತು ಇಬ್ಬರು ಪಿಎಸ್‌ಐ ಸೇರಿ 15 ಜನ  ಪೊಲೀಸ್‌ ಸಿಬ್ಬಂದಿನ್ನು ಕ್ವಾರಂಟೈನ್ ಮಾಡಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠ ಡಿ.ಎಲ್ ನಾಗರಾಜ ವಿಷಯವನ್ನು ಖಚಿತ ಪಡಿಸಿದ್ದಾರೆ..

ಚಿಟಗುಪ್ಪ ಠಾಣೆ ಪೊಲೀಸರು ಶುಕ್ರವಾರ ತಾಲ್ಲೂಕಿನ ಗ್ರಾಮವೊಂದರಲ್ಲಿ ಜೂಜಾಟ ನಿರತ ಅಡ್ಡೆ ಮೇಲೆ ದಾಳಿ ನಡೆಸಿ 12 ಜನರನ್ನು ಬಂಧಿಸಿದ್ದರು. ಇವರಲ್ಲಿ ಇಬ್ಬರು ಬೀದರ್‌ ನಗರದಲ್ಲಿ ಪತ್ತೆಯಾಗಿರುವ ಕೋವಿಡ್  19 ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬಂದಿದ್ದರು.
 
ಇದರಿಂದ ಪೊಲೀಸರು ದ್ವಿತೀಯ ಸಂಪರ್ಕಕ್ಕೆ ಬಂದಿರುವ ಹಿನ್ನೆಲೆ ಯಲ್ಲಿ ಪೊಲೀಸ ಅಧಿಕಾರಿಗಳು ಸೇರಿ 15 ಜನರನ್ನು ಕ್ವಾರಂಟೈನ್ ಮಾಡಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು