ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್ ನಗರಸಭೆ: ಕಾಂಗ್ರೆಸ್ ಮುನ್ನಡೆ

Last Updated 30 ಏಪ್ರಿಲ್ 2021, 5:58 IST
ಅಕ್ಷರ ಗಾತ್ರ

ಬೀದರ್: ಬೀದರ್ ನಗರಸಭೆ ಚುನಾವಣೆ ಮತ ಎಣಿಕೆ ಕಾರ್ಯ ಇಲ್ಲಿನ ಗುರುನಾನಕ ಪಬ್ಲಿಕ್ ಶಾಲೆಯಲ್ಲಿ ಶುಕ್ರವಾರ ಬೆಳಿಗ್ಗೆ ಆರಂಭಗೊಡಿತು. ಬೆಳಿಗ್ಗೆ 10.15ರವರೆಗಿನ ಮತ ಎಣಿಕೆಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

ಚುನಾವಣೆ ನಡೆದ 32 ಸ್ಥಾನಗಳ ಪೈಕಿ 8 ರಲ್ಲಿ ಕಾಂಗ್ರೆಸ್, 4ರಲ್ಲಿ ಜೆಡಿಎಸ್, 2ರಲ್ಲಿ ಎಐಎಂಐಎಂ ಹಾಗೂ 1 ಸ್ಥಾನದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

ಮಧ್ಯಾಹ್ನ 12ರ ವೇಳೆಗೆ ಎಲ್ಲ ಸ್ಥಾನಗಳ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.

ನಗರಸಭೆಯ 35 ವಾರ್ಡ್ ಗಳ ಪೈಕಿ ವಾರ್ಡ್ ಸಂಖ್ಯೆ 28ಕ್ಕೆ ಅವಿರೋಧ ಆಯ್ಕೆ ನಡೆದಿದೆ. ವಾರ್ಡ್ ಸಂಖ್ಯೆ 26 ಹಾಗೂ 32 ಹೊರತುಪಡಿಸಿ ಉಳಿದ 32 ವಾರ್ಡ್‍ಗಳ ಸದಸ್ಯ ಸ್ಥಾನಗಳಿಗೆ ಮಾತ್ರ ಚುನಾವಣೆ ನಡೆದಿದೆ.

ಸುರಕ್ಷತಾ ಕ್ರಮ: ಮತ ಎಣಿಕೆ‌ ಕೇಂದ್ರದಲ್ಲಿ ಸುರಕ್ಷತಾ ಕ್ರಮ ಅನುಸರಿಸಲಾಗಿದೆ. ಬಂದೋಬಸ್ತ್ಗೆ ನಿಯೋಜಿತ ಪೊಲೀಸ್ ಸಿಬ್ಬಂದಿ ಪಾಸ್, ಕೋವಿಡ್ ನೆಗೆಟಿವ್ ವರದಿ ಹೊಂದಿದ್ದ ಅಭ್ಯರ್ಥಿಗಳು ಹಾಗೂ ಮತ ಎಣಿಕೆ ಏಜೆಂಟರಿಗೆ ಮಾತ್ರ ಎಣಿಕೆ ಕೇಂದ್ರದೊಳಗೆ ಪ್ರವೇಶಿಸಲು ಅವಕಾಶವಿದೆ.

ಅಭ್ಯರ್ಥಿಗಳು, ಮತ ಎಣಿಕೆ ಏಜೆಂಟರು ಹಾಗೂ ಎಣಿಕೆ ಕರ್ತವ್ಯಕ್ಕೆ ನಿಯೋಜಿತ ಸಿಬ್ಬಂದಿ ಮಾಸ್ಕ್ ಧರಿಸುವುದರ ಜೊತೆಗೆ ಸುರಕ್ಷಿತ ಅಂತರ ಕಾಯ್ದುಕೊಂಡರು. ಮೊದಲಿಗೆ ಮತ ಎಣಿಕೆ ಕೇಂದ್ರವನ್ನು ಸ್ಯಾನಿಟೈಸ್ ಮಾಡಲಾಯಿತು.

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು: ಹುಮನಾಬಾದ್ ಪಟ್ಟಣ ಪಂಚಾಯಿತಿಯ ವಾರ್ಡ್ ಸಂಖ್ಯೆ 11ರ ಸದಸ್ಯ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ 168 ಮತಗಳನ್ನು ಪಡೆದು ಗೆಲುವು ಸಾಧಿಸಿದರು. ಮತ ಎಣಿಕೆ ಹುಮನಾಬಾದ್ ತಹಶೀಲ್ದಾರ್ ಕಚೇರಿಯಲ್ಲಿ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT