ಶನಿವಾರ, ಅಕ್ಟೋಬರ್ 24, 2020
28 °C
ಜೆಸ್ಕಾಂ ಅಧಿಕಾರಿಗಳಿಗೆ ಸಚಿವರ ಸೂಚನೆ

ವಿದ್ಯುತ್ ಅವಘಡ: ಎಚ್ಚರ ವಹಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಮಳೆಗಾಲ ಸಂದರ್ಭದಲ್ಲಿ ವಿದ್ಯುತ್ ಅವಘಡಗಳು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಜೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಳೆ, ಗಾಳಿಯಿಂದ ಅಲ್ಲಲ್ಲಿ ವಿದ್ಯುತ್ ತಂತಿಗಳು ಕತ್ತರಿಸಿ ಬೀಳುವ, ಶಾರ್ಟ್ ಸರ್ಕೀಟ್‍ನಂತಹ ಪ್ರಕರಣಗಳು ಸಂಭವಿಸುವ ಸಾಧ್ಯತೆ ಇರುತ್ತವೆ. ಹೀಗಾಗಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಜಿಲ್ಲೆಯಾದ್ಯಂತ ನಿರಂತರ ಜ್ಯೋತಿ ಹಾಗೂ ಪಂಡಿತ ದೀನ ದಯಾಳ್ ಉಪಾಧ್ಯಾಯ ಯೋಜನೆ ಅಡಿಯಲ್ಲಿ ಸಾಕಷ್ಟು ಕಳಪೆ ಕಾಮಗಾರಿಗಳು ನಡೆದಿರುವ ಬಗ್ಗೆ ದೂರುಗಳಿವೆ. ಅಧಿಕಾರಿಗಳು ಮುತುವರ್ಜಿ ವಹಿಸಿ ಕೆಲಸ ಮಾಡಬೇಕು. ಜಿಲ್ಲೆಯ ಯಾವುದೇ ಭಾಗದಲ್ಲಿ ವಿದ್ಯುತ್ ವ್ಯತ್ಯಯವಾಗುವ ಸನ್ನಿವೇಶ ಉಂಟಾದಲ್ಲಿ ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಬೇಕು ಎಂದು ತಿಳಿಸಿದ್ದಾರೆ.

ಎಲ್ಲಿಯಾದರೂ ಟ್ರಾನ್ಸ್‍ಫಾರ್ಮರ್‍ಗಳು ಕೆಟ್ಟು ಹೋದರೆ ಕೂಡಲೇ ದುರಸ್ತಿ ಕಾರ್ಯ ಕೈಗೊಂಡು ರೈತರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ತ್ರೀಫೇಸ್, ಟೂ ಫೇಸ್ ಬಗ್ಗೆ ಸಾರ್ವಜನಿಕವಾಗಿ ಮಾಹಿತಿ ನೀಡುತ್ತಿರಬೇಕು. ನಿಗಮಗಳಿಂದ ವಿವಿಧ ಯೋಜನೆಗಳಡಿ ಮಂಜೂರಾಗಿರುವ ಕೊಳವೆಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕೆಲಸ ಬೇಗ ಮುಗಿಸಬೇಕು ಎಂದು ತಾಕೀತು ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು