ಔರಾದ್: ತಾಲ್ಲೂಕಿನ ಮಂಜ್ರಾ ನದಿ ಪಾತ್ರದ ಕೌಡಗಾಂವ, ಬಲ್ಲೂರ(ಜೆ) ಕೌಠಾ(ಕೆ), ಕೌಠಾ(ಬಿ), ಪಾಶಾಪೂರ, ಗಡಿಕುಶನೂರ ಸೇರಿದಂತೆ ವಿವಿಧ ಗ್ರಾಮಗಳ ರೈತರ ಪಂಪಸೆಟ್ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಯಾಗುತ್ತಿಲ್ಲ ಎಂದು ರೈತರು ಗೋಳು ತೋಡಿಕೊಂಡರು.

ಈ ಬಾರಿ ಜಾಸ್ತಿ ಮಳೆ ಹಾಗೂ ನದಿ ಪ್ರವಾಹದಿಂದ ಮುಂಗಾರು ಬೆಳೆ ಪೂರ್ಣ ಹಾಳಾಗಿದೆ. ಹಿಂಗಾರು ಬೆಳೆ ಮೇಲೆ ನಿರೀಕ್ಷೆ ಇಟ್ಟುಕೊಂಡ ರೈತರಿಗೆ ವಿದ್ಯುತ್ ಕೊರತೆ ಎದುರಾಗಿದೆ. ಬೆಳಿಗ್ಗೆ 9 ರಿಂದ 4ರವರೆಗೆ ವರೆಗೆ ರೈತರಿಗೆ ತ್ರಿಫೇಸ್ ವಿದ್ಯುತ್ ಕೊಡಬೇಕು ಎಂಬ ನಿಯಮವಿದೆ. ಆದರೆ ಈ ನಿಯಮ ಪಾಲನೆಯಾಗುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು.

ಪದೇ ಪದೇ ವಿದ್ಯುತ್ ಕಡಿತದಿಂದ ಕಬ್ಬು, ಕಡಲೆ ಬೆಳೆಗೆ ನೀರು ಹರಿಸಲು ಆಗುತ್ತಿಲ್ಲ. ನಮ್ಮಲ್ಲಿ ಲೈನಮನ್ಗಳು ಸರಿಯಾಗಿ ಕೆಲಸ ಮಾಡದೆ ಇರುವುದರಿಂದ ಸಮಸ್ಯೆ ಉಂಟಾಗುತ್ತಿದೆ ಎಂದು ರೈತ ಮುಖಂಡ ರವಿ ದೇವರೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಭಾರಿ ಮಳೆ ಹಾಗೂ ಪ್ರವಾಹದಿಂದ ನದಿ ಪಾತ್ರದ ಹೊಲಗಳಲ್ಲಿ ಕಂಬಗಳು ಬಿದ್ದಿವೆ. ವಿದ್ಯುತ್ ತಂತಿ ಜೋತಾಡುತ್ತಿವೆ. ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

ಈಚೆಗೆ ಗ್ರಾಮಕ್ಕೆ ಭೇಟಿ ನೀಡಿದ ಶಾಸಕ ಪ್ರಭು ಚವಾಣ್ ಹಾಗೂ ಅಧಿಕಾರಿಗಳಿಗೆ ರೈತರು ಕೃಷಿ ಪಂಪಸೆಟ್ಗಳಿಗೆ ಸಮರ್ಪಕ ವಿದ್ಯುತ್ ಪೂರೈಸುವಂತೆ ಮನವಿ ಪತ್ರ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.