ಮಂಗಳವಾರ, 8 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೀದರ್‌ | ಪ್ರಜಾವಾಣಿ ವರದಿ ಪರಿಣಾಮ: 15 ತಿಂಗಳ ಬಳಿಕ ಮಕ್ಕಳ ರಕ್ಷಣಾ ಸಮಿತಿ ಸಭೆ

ಪ್ರಜಾವಾಣಿ ವರದಿ ಪರಿಣಾಮ
Published : 9 ನವೆಂಬರ್ 2023, 15:50 IST
Last Updated : 9 ನವೆಂಬರ್ 2023, 15:50 IST
ಫಾಲೋ ಮಾಡಿ
Comments

ಬೀದರ್‌: 15 ತಿಂಗಳ ಬಳಿಕ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಮತ್ತು ರಕ್ಷಣಾ ಸಮಿತಿ ಸಭೆ ನಡೆದಿದೆ.

‘15 ತಿಂಗಳಿಂದ ನಡೆಯದ ಮಕ್ಕಳ ರಕ್ಷಣಾ ಸಮಿತಿ ಸಭೆ’ ಶೀರ್ಷಿಕೆ ಅಡಿ ಅ. 10ರಂದು ‘ಪ್ರಜಾವಾಣಿ’ ವರದಿ ಪ್ರಕಟಿಸಿತ್ತು.

ವರದಿಯಿಂದ ಎಚ್ಚೆತ್ತುಕೊಂಡ ಸಮಿತಿ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರು ನ.7ರಂದು ನಗರದಲ್ಲಿ ಸಭೆ ನಡೆಸಿದ್ದಾರೆ. ‘ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗೆ ಅಧಿಕಾರಿಗಳು ಶ್ರಮಿಸಬೇಕು. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ 36 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಗಳು ನಡೆದಿವೆ. ಶಾಲೆಗಳಲ್ಲಿ ಮಕ್ಕಳ ರಕ್ಷಣೆಗೆ ಸಂಬಂಧಿಸಿ ಜಾಗೃತಿ ಜಾಥಾ ಆಯೋಜಿಸಬೇಕು’ ಎಂದು ಸೂಚಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಗುರುರಾಜ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರಭಾಕರ, ಜಿಲ್ಲಾ ಆರೋಗ್ಯ ಅಧಿಕಾರಿ ಧ್ಯಾನೇಶ್ವರ ನೀರಗುಡಿ, ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಅಧ್ಯಕ್ಷೆ ರಜಿಯಾ ಬಳಬಟ್ಟಿ, ಸದಸ್ಯೆ ಮಂಜುಳಾ, ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೌರಿಶಂಕರ ಪ್ರತಾಪುರ, ಸಿಡಿಪಿಒ ಶಾರದಾ ಕಲ್ಮಲಕರ್‌ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT