ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಲಸೂರ: ರಸ್ತೆ ಇಕ್ಕೆಲಗಳಲ್ಲಿ ಬೆಳೆದಿದ್ದ ಮುಳ್ಳುಕಂಟಿ ತೆರವು

Published 14 ಡಿಸೆಂಬರ್ 2023, 14:44 IST
Last Updated 14 ಡಿಸೆಂಬರ್ 2023, 14:44 IST
ಅಕ್ಷರ ಗಾತ್ರ

ಹುಲಸೂರ: ರಸ್ತೆ ಪಕ್ಕದಲ್ಲಿ ಬೆಳೆದು ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದ ಮುಳ್ಳುಕಂಟಿಗಳನ್ನು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಈ ಮೂಲಕ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ತಾಲ್ಲೂಕು ಕೇಂದ್ರದಿಂದ ವಿವಿಧ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಎರಡೂ ಬದಿಗಳಲ್ಲಿ ಹಲವು ತಿಂಗಳಿನಿಂದ ಮುಳ್ಳುಕಂಟಿಗಳು ಎತ್ತರಕ್ಕೆ ಬೆಳೆದಿದ್ದವು. ಇದರಿಂದಾಗಿ ವಾಹನ ಚಾಲಕರು ಸುಗಮ ಸಂಚಾರಕ್ಕೆ ತೊಂದರೆಯಾಗಿತ್ತು.

ಈ ವಿಷಯಕ್ಕೆ ಸಂಬಂಧಿಸಿದಂತೆ ಅ. 27ರ ‘ಪ್ರಜಾವಾಣಿ’ಯಲ್ಲಿ ‘ರಸ್ತೆ ಇಕ್ಕೆಲಗಳಲ್ಲಿ ಬೆಳೆದ ಮುಳ್ಳುಕಂಟಿ’ ಶೀರ್ಷಿಕೆ ಅಡಿಯಲ್ಲಿ ವರದಿ ಪ್ರಕಟಗೊಂಡಿತ್ತು. ಪತ್ರಿಕೆಯಲ್ಲಿ ವರದಿ ಪ್ರಕಟಗೊಂಡ ಬೆನ್ನಲ್ಲೇ ಎಚ್ಚೆತ್ತುಕೊಂಡ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತಕ್ಷಣ ಸರ್ವೇ ಮಾಡಿಸಿ, ರಸ್ತೆ ಪಕ್ಕದ ಹುಲ್ಲು ಬೆಳೆದ ಕಂಟಿಗಳು ತೆರವುಗೊಳಿಸಿ ಸಾರ್ವಜನಿಕರಿಗೆ ಅನುವು ಮಾಡಿಕೊಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT