ಮಂಗಳವಾರ, ಜನವರಿ 18, 2022
15 °C

ಖಾನಾವಳಿ ನಡೆಸಿ ಕನ್ನಡ ಶಾಲೆ ಉಳಿಸಿದ ನಾಗವೇಣಿ...

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಖಾನಾವಳಿಯಲ್ಲಿ ರೊಟ್ಟಿ ಮಾಡಿ ಜೀವನ ನಿರ್ವಹಿಸುತ್ತಿರುವ ಬೀದರ್ ತಾಲ್ಲೂಕಿನ ಕೊಳಾರ (ಕೆ) ಗ್ರಾಮದ ನಾಗವೇಣಿ ಶಂಕರ್ ತಮ್ಮ ಕುಟುಂಬಕ್ಕೆ ಅಷ್ಟೇ ಅಲ್ಲ, ಎರಡು ಶಾಲೆಗಳಿಗೆ ಪೋಷಕರೂ ಆಗಿದ್ದಾರೆ.

ಕೊಳಾರ(ಕೆ) ಗ್ರಾಮದ ಬಸವ ಚೇತನ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಘಾಳೆಪ್ಪ ಕೋಟೆ ಪ್ರೌಢಶಾಲೆ ಬಾಗಿಲು ಮುಚ್ಚುವ ಹಂತಕ್ಕೆ ಬಂದಿದ್ದವು. ಈ ಸಂಸ್ಥೆಯ ಆಡಳಿತ ಮಂಡಳಿಯಲ್ಲಿ ನಾಗವೇಣಿ ಅವರ ಪತಿ ಶಂಕರ ಅವರೂ ಇದ್ದರು. ಆರ್ಥಿಕ ಸಮಸ್ಯೆಯಿಂದ ಒಬ್ಬೊಬ್ಬರೇ ಶಿಕ್ಷಕರು ಕೆಲಸ ಬಿಟ್ಟು ಹೋಗುತ್ತಿದ್ದರು. ಶಾಲೆಗೆ ಸ್ವಂತ ಕಟ್ಟಡ ಸಹ ಇರಲಿಲ್ಲ. ಶಿಕ್ಷಣ ಸಂಸ್ಥೆಯೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದ ನಾಗವೇಣಿ ಅವರು, ಖಾನಾವಳಿಯಿಂದ ಬರುತ್ತಿದ್ದ ಆದಾಯದ ಬಹುಭಾಗವನ್ನು ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿಗೆ ವೇತನವಾಗಿ ನೀಡಿ ಶಾಲೆಗಳನ್ನು ಉಳಿಸಿದರು. ಸಂಸ್ಥೆಯವರು ಶಾಲೆಯನ್ನು ನಾಗವೇಣಿ ಅವರ ಸುಪರ್ದಿಗೆ ಒಪ್ಪಿಸಿದ್ದಾರೆ. ತಾಲ್ಲೂಕಿನ 3 ಗ್ರಾಮಗಳ ವಿದ್ಯಾರ್ಥಿಗಳು ಇಲ್ಲಿ ಅಭ್ಯಾಸ ಮಾಡುತ್ತಿದ್ದಾರೆ. ಕೊಳಾರ(ಕೆ)ದಲ್ಲಿ ಪ್ರಾಥಮಿಕ ಹಾಗೂ ನಿಜಾಮ
ಪುರದಲ್ಲಿ ಪ್ರೌಢಶಾಲಾ ಕೊಠಡಿಗಳನ್ನು ನಿರ್ಮಿಸಿದ್ದಾರೆ.  ಕುಟುಂಬದ ಆರ್ಥಿಕ ಸ್ಥಿತಿ ಸುಧಾರಿಸಿದ್ದರೂ, ರೊಟ್ಟಿ ಬಡಿಯುವುದನ್ನು ನಿಲ್ಲಿಸಿಲ್ಲ. ಶಾಲೆಯ ಆವರಣದಲ್ಲಿ ಸಸಿಗಳನ್ನು ನೆಟ್ಟು ಪರಿಸರ ಕಾಳಜಿ  ತೋರುತ್ತಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.