ಗುರುವಾರ , ಜೂನ್ 30, 2022
23 °C

ಮುಂಗಾರು ಬಿತ್ತನೆಗೆ ಸಿದ್ಧತೆ ಮಾಡಿಕೊಳ್ಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ರೈತರು ಮುಂಗಾರು ಹಂಗಾಮಿನ ಬಿತ್ತನೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಸುನೀಲಕುಮಾರ ಎನ್.ಎಂ. ಸಲಹೆ ಮಾಡಿದರು.

ಇಲ್ಲಿಯ ಹೂಗೇರಿಯ ಕೃಷಿ ಸಂಶೋಧನಾ ಕೇಂದ್ರದಲ್ಲಿ ಆಯೋಜಿಸಿದ್ದ ಮುಂಗಾರು ಬೀಜ ದಿನೋತ್ಸವದಲ್ಲಿ ಅವರು ಮಾತನಾಡಿದರು.
ಮುಂಗಾರು ಹಂಗಾಮಿನಲ್ಲಿ ಬೆಳೆಯಬಹುದಾದ ಬೆಳೆಗಳ ಬಗ್ಗೆ ಮಾಹಿತಿ ನೀಡಿದರು.

ಕೃಷಿ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ. ಸುನೀಲ್ ಕುಲಕರ್ಣಿ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಬೀಜ ನಿಗಮದ ಉಪ ನಿರ್ದೇಶಕ ಗುರು ಬಸವರಾಜ, ಬೀದರ್ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಧೂಳಪ್ಪ ಹೊಸಾಳೆ, ಬಸವರಾಜ ಬಿರಾದಾರ, ಕೃಷಿ ವಿಜ್ಞಾನಿ ಡಾ. ಆರ್. ಎಲ್. ಜಾಧವ್, ಆಧುನಿಕ ಬೇಸಾಯ ಕ್ರಮ, ಮಳೆ, ಬೀಜೋಪಾಚಾರ ಕುರಿತು ಮಾತನಾಡಿದರು.
ಡಾ. ಜ್ಞಾನದೇವ ಬುಳ್ಳಾ ಸ್ವಾಗತಿಸಿದರು. ಡಾ. ರಾಮರಾವ್ ವಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.