ಶನಿವಾರ, ಏಪ್ರಿಲ್ 17, 2021
23 °C
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ ಕಟೀಲ್ ಸಾರಥ್ಯ

‘ಉಪ ಚುನಾವಣೆಯ ಶಂಖನಾದಕ್ಕೆ ಸಿದ್ಧತೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಸವಕಲ್ಯಾಣ: ಮಾರ್ಚ್ 7ರಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ ಕಟೀಲ್ ಅವರ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರ ಸಮಾವೇಶ ನಡೆಯಲಿದ್ದು, ಎಲ್ಲ ಸಿದ್ಧತೆ ಕೈಗೊಳ್ಳಲಾಗಿದೆ.

ಅಕ್ಕಮಹಾದೇವಿ ಕಾಲೇಜು ಆವರಣದಲ್ಲಿ ಬೃಹತ್ ವೇದಿಕೆ ನಿರ್ಮಿಸಿ ಸಾವಿರಾರು ಆಸನಗಳ ವ್ಯವಸ್ಥೆ ಮಾಡಲಾಗಿದೆ.

ಸಿದ್ಧತೆ ಪರಿಶೀಲಿಸಿದ ಸಂಸದ ಭಗವಂತ ಖೂಬಾ ಅವರು ನಂತರ ಪಕ್ಷದ ಮುಖಂಡರ ಸಭೆ ನಡೆಸಿ ಕಾರ್ಯಕ್ರಮದ ಯಶಸ್ವಿಗೆ ಸಲಹೆ, ಸೂಚನೆ ನೀಡಿದರು.

ನಂತರ ಅವರು ಮಾತನಾಡಿ, ‘ಮಧ್ಯಾಹ್ನ ಬೈಕ್ ರ್‍ಯಾಲಿ ನಡೆಯುವುದು. ಸಂಜೆ 4 ಗಂಟೆಗೆ ಸಮಾರಂಭ ನಡೆಯಲಿದೆ. 20 ಸಾವಿರಕ್ಕೂ ಹೆಚ್ಚಿನ ಕಾರ್ಯಕರ್ತರು ಪಾಲ್ಗೊಳ್ಳುತ್ತಿದ್ದು, ಈ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಶಂಖನಾದ ಊದಲಾಗುತ್ತದೆ. ಚುನಾವಣೆ ಉಸ್ತುವಾರಿಗಳಾದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವರಾದ ವಿ.ಸೋಮಣ್ಣ, ಪ್ರಭು ಚವಾಣ್ ಮುಂತಾದವರು ಪಾಲ್ಗೊಳ್ಳಲಿದ್ದಾರೆ’ ಎಂದರು.

‘ಅನ್ಯ ಪಕ್ಷಗಳ ಕೆಲ ಮುಖಂಡರು ಈ ಕಾರ್ಯಕ್ರಮದಲ್ಲಿ ಪಕ್ಷಕ್ಕೆ ಸೇರ್ಪಡೆ ಆಗಲಿದ್ದಾರೆ. ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ 25000 ಮತಗಳಕ್ಕಿಂತಲೂ ಹೆಚ್ಚಿನ ಅಂತರದಿಂದ ಗೆಲ್ಲುವಂತೆ ಮತಗಟ್ಟೆ ಮಟ್ಟದಲ್ಲಿ ಕೆಲಸ ನಡೆದಿದೆ. ಕಾಂಗ್ರೆಸ್ ಇಲ್ಲಿ ಬರೀ ಹೆಸರಿಗೆ ಇದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಅನೇಕ ಜನಪರ ಯೋಜನೆಗಳನ್ನು ಕೈಗೊಂಡಿದ್ದರಿಂದ ಬಿಜೆಪಿ ಬಗ್ಗೆ ಒಲವಿದೆ’ ಎಂದರು.

ಚುನಾವಣೆ ಉಸ್ತುವಾರಿಗಳಾದ ಈಶ್ವರಸಿಂಗ್ ಠಾಕೂರ್, ಅಮರನಾಥ ಪಾಟೀಲ, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್ ಮಾತನಾಡಿದರು.

ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಗುಂಡುರೆಡ್ಡಿ, ಸುಧೀರ ಕಾಡಾದಿ, ಪ್ರಮುಖರಾದ ಸಂಜಯ ಪಟವಾರಿ, ಶರಣು ಸಲಗರ, ರವಿ ಚಂದನಕೆರೆ, ದೀಪಕ ಗಾಯಕವಾಡ, ಅರವಿಂದ ಮುತ್ತೆ, ಸೂರ್ಯಕಾಂತ ಚಿಲ್ಲಾಬಟ್ಟೆ, ಪ್ರದೀಪ ವಾತಡೆ, ಅನಿಲ ಭೂಸಾರೆ, ಅಶೋಕ ವಕಾರೆ, ಕೃಷ್ಣಾ ಗೋಣೆ, ಡಾ.ಬಸವರಾಜಸ್ವಾಮಿ ತ್ರಿಪುರಾಂತ, ವಿಜಯಕುಮಾರ ಮಂಠಾಳೆ, ಶೈಲೇಂದ್ರ ಬೆಲ್ದಾಳೆ, ಉಮೇಶ ಬಿರಬಟ್ಟೆ ಪಾಲ್ಗೊಂಡಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.