ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಿರಿ: ಬೆಲ್ದಾಳೆ ಸಲಹೆ

ರಾಜ್ಯ ಮಹಿಳಾ ಸಹಕಾರ ಮಹಾಮಂಡಳ ಅಧ್ಯಕ್ಷೆ ಬೆಲ್ದಾಳೆ ಸಲಹೆ
Last Updated 19 ಮಾರ್ಚ್ 2021, 16:43 IST
ಅಕ್ಷರ ಗಾತ್ರ

ಬೀದರ್: ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಬೇಕು ಎಂದು ರಾಜ್ಯ ಮಹಿಳಾ ಸಹಕಾರ ಮಹಾಮಂಡಳ ಅಧ್ಯಕ್ಷೆ ಶಕುಂತಲಾ ಬೆಲ್ದಾಳೆ ಒತ್ತಾಯಿಸಿದರು.

ಇಲ್ಲಿಯ ಪ್ರತಾಪನಗರದ ಡಿಸಿಸಿ ಬ್ಯಾಂಕ್‍ನ ಶಾರದಾ ಆರ್‍ಸೆಟ್ ಸಂಸ್ಥೆಯಲ್ಲಿ ಕಲಬುರ್ಗಿ ವಿಭಾಗದ ಮಹಿಳಾ ಸಹಕಾರ ಸಂಘಗಳ ಅಧ್ಯಕ್ಷರು, ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಆಯೋಜಿಸಿದ್ದ ವಿಶೇಷ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಮಹಿಳೆಯರಿಗೂ ಸ್ಥಾನಮಾನಗಳು ದೊರಕಿವೆ. ಆದರೂ, ಮಹಿಳೆಯರು ಇನ್ನಷ್ಟು ಜಾಗೃತರಾಗಬೇಕಿದೆ. ಬೀದರ್ ಜಿಲ್ಲೆಯಲ್ಲಿ ಮಹಿಳಾ ಸಬಲೀಕರಣದಲ್ಲಿ ದಿ. ಮಾಜಿ ಸಚಿವ ಗುರುಪಾದಪ್ಪ ನಾಗಮಾರಪಳ್ಳಿ ಅವರು ಪ್ರಮುಖ ಪಾತ್ರ ವಹಿಸಿದ್ದರು ಎಂದು ತಿಳಿಸಿದರು.

ಡಿಸಿಸಿ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಚನ್ನಬಸಯ್ಯ ಸ್ವಾಮಿ ಮಾತನಾಡಿ,‘ಸಹಕಾರ ಕ್ಷೇತ್ರದ ಮೂಲಕ ಮಹಿಳೆಯರು ಉತ್ತಮ ಸ್ಥಾನಮಾನ ಹಾಗೂ ಯಶಸ್ಸು ಗಳಿಸಲು ಸಾಧ್ಯವಿದೆ’ ಎಂದು ಹೇಳಿದರು.

ಜಿಲ್ಲಾ ಸಹಕಾರ ಯುನಿಯನ್ ಅಧ್ಯಕ್ಷ ಪರಮೇಶ್ವರ ಮುಗುಟೆ ಮಾತನಾಡಿ, ಇಂದು ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲೂ ತಮ್ಮ ಛಾಪು ಮೂಡಿಸುತ್ತಿದ್ದಾರೆ. ಆರ್ಥಿಕವಾಗಿ ಸಬಲರಾಗುತ್ತಿದ್ದಾರೆ ಎಂದು ತಿಳಿಸಿದರು. ಡಿಸಿಸಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಲ್ಲಿಕಾರ್ಜುನ ಮಹಾಜನ್, ಪ್ರಧಾನ ವ್ಯವಸ್ಥಾಪಕ ವಿಠ್ಠಲರೆಡ್ಡಿ ಯಡಮಲ್ಲೆ ಉಪಸ್ಥಿತರಿದ್ದರು.

ಶಶಿಶೇಖರ ರೆಡ್ಡಿ, ಸಿದ್ದು ಯಾಪಲಪರವಿ, ಡಾ. ಹೇಮಲತಾ ಪಾಟೀಲ ಉಪನ್ಯಾಸ ನೀಡಿದರು. ಜಿಲ್ಲಾ ಸಹಕಾರ ಯುನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಆರ್. ಮಲ್ಲಮ್ಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT