ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟನ್ ಕಬ್ಬಿಗೆ ₹2,300 ಬೆಲೆ ನಿಗದಿ

ರೈತ ಪರ ಸಂಘಟನೆಗಳ ಹೋರಾಟಕ್ಕೆ ಎಂಜಿಎಸ್‍ಎಸ್‍ಕೆ ಸ್ಪಂದನೆ
Last Updated 7 ಡಿಸೆಂಬರ್ 2022, 14:59 IST
ಅಕ್ಷರ ಗಾತ್ರ

ಬೀದರ್: ಭಾಲ್ಕಿ ಸಮೀಪದ ಮಹಾತ್ಮ ಗಾಂಧಿ ಸಹಕಾರ ಸಕ್ಕರೆ ಕಾರ್ಖಾನೆಯು 2022-23ನೇ ಹಂಗಾಮಿಗೆ ಪ್ರತಿ ಟನ್ ಕಬ್ಬಿಗೆ ಮೊದಲ ಕಂತಿನ ರೂಪದಲ್ಲಿ ₹ 2,300 ಬೆಲೆ ನಿಗದಿಪಡಿಸಿದೆ.

2021-22ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ರೈತ ಮುಖಂಡರು ಹಾಗೂ ರೈತರ ಒತ್ತಾಯದ ಮೇರೆಗೆ ಪ್ರತಿ ಟನ್‍ಗೆ ಮೊದಲ ಕಂತಾಗಿ ₹ 2,200 ನಿಗದಿ ಮಾಡಲಾಗಿತ್ತು. ಡಿ. 5 ರಂದು ರೈತ ಪರ ಸಂಘಟನೆಗಳು ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸಿದ ಹೋರಾಟ ಹಾಗೂ ಬುಧವಾರ ಕಾರ್ಖಾನೆ ಕಬ್ಬು ವಿಭಾಗದಲ್ಲಿ ನಡೆದ ಸಭೆಯಲ್ಲಿ ಮಂಡಿಸಿದ ರೈತರ ಬೇಡಿಕೆಗೆ ಸ್ಪಂದಿಸಿ, ಪ್ರತಿ ಟನ್ ಕಬ್ಬಿಗೆ ₹ 2,300 ಬೆಲೆ ನಿಗದಿಪಡಿಸಲಾಗಿದೆ ಎಂದು ಕಾರ್ಖಾನೆ ಹೇಳಿಕೆ ತಿಳಿಸಿದೆ.

2022-23ನೇ ಹಂಗಾಮಿನಲ್ಲಿ ಕಾರ್ಖಾನೆಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಮೊದಲ ಕಂತಾಗಿ ಪ್ರತಿ ಟನ್‍ಗೆ ₹ 2,300 ಬೆಲೆ ಕೊಡಲು ನಿರ್ಧರಿಸಲಾಗಿದೆ. ಪ್ರಸಕ್ತ ಸಾಲಿನ ಎರಡನೇ ಕಂತಿನ ಕುರಿತು ಮುಂಬರುವ ಕಾರ್ಖಾನೆಯ ಸರ್ವ ಸದಸ್ಯರ ಸಭೆಯಲ್ಲಿ ಚರ್ಚಿಸಿ ನಿರ್ಣಯಿಸಲಾಗುವುದು ಎಂದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT