ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಜೆಪಿಯಿಂದ ಬೆಲೆ ಏರಿಕೆ ಕೊಡುಗೆ: ಅವಿನಾಶ ಶಿಂಧೆ

Last Updated 28 ಮಾರ್ಚ್ 2023, 12:34 IST
ಅಕ್ಷರ ಗಾತ್ರ

ಕಮಲನಗರ: ‘ಬಿಜೆಪಿ ಜನರಿಗೆ ಬೆಲೆ ಏರಿಕೆಯ ಕೊಡುಗೆ ನೀಡಿದೆ. ಜನರು ಇದನ್ನು ಅರಿತು ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಬೇಕು’ ಎಂದು ಜೆಡಿಎಸ್‌ ಮುಖಂಡ ಅವಿನಾಶ ಶಿಂಧೆ ಹೇಳಿದರು.

ತಾಲ್ಲೂಕಿನ ಖೇಡ ಸಂಗಮ, ಸೋನಾಳ, ಸೋನಾಳವಾಡಿ, ಹೊರಂಡಿ ಹಾಗೂ ಬಾಲೂರ ಚಿಕ್ಕಮುರ್ಗ ಗ್ರಾಮಗಳಲ್ಲಿ ಸಂಚರಿಸಿ ಪಕ್ಷದ ಸಾಧನೆಗಳನ್ನು ಜನರಿಗೆ ತಿಳಿಸಿ ಮಾತನಾಡಿದರು.

ದೇಶದಲ್ಲಿ ಡಬಲ್ ಎಂಜಿನ್ ಸರ್ಕಾರವಿದ್ದರು ಸಹ ಜನರಿಗೆ ಸೌಲಭ್ಯಗಳು ಸಿಗುತ್ತಿಲ್ಲ. ಅಡುಗೆ ಅನಿಲ ಸಿಲಿಂಡರ್ ಬೆಲೆ ಹೆಚ್ಚಳವಾಗಿದೆ. ಸಬ್ಸಿಡಿ ಸಹ ನಿಲ್ಲಿಸಲಾಗಿದೆ ಎಂದು ದೂರಿದರು.

ಎಚ್‌.ಡಿ.ಕುಮಾರಸ್ವಾಮಿ ಅವರ ಅಧಿಕಾರವಧಿಯಲ್ಲಿ ರೈತರ ಸಾಲಮನ್ನಾ ಮಾಡಲಾಗಿದೆ. ರೈತರಿಗೆ ಸೌಲಭ್ಯಗಳನ್ನು ನೀಡಿದ್ದಾರೆ ಎಂದರು.

ಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ಗೆ ಮತ ನೀಡಬೇಕು ಎಂದು ಮನವಿ ಮಾಡಿದರು.

ಶಿವಕುಮಾರ ಬದ್ನಾಳೆ, ಸುರೇಶ ಕಾಂಬಳೆ, ಸಾಯಿನಾಥ ಗೌಳಿ, ರಜನಿಕಾಂತ ಕಾಂಬಳೆ, ಶಮ್‌ಸುದ್ದೀನ್ ಶೇಖ್ ಹಾಗೂ ಬಬನ್ ರಾಠೋಡ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT