ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಾಥಮಿಕ ಶಾಲಾ ಶಿಕ್ಷಕರ ಪ್ರತಿಭಟನೆ- ವೃಂದ, ನೇಮಕಾತಿ ನಿಯಮ ತಿದ್ದುಪಡಿಗೆ ಒತ್ತಾಯ

Last Updated 25 ಅಕ್ಟೋಬರ್ 2021, 12:52 IST
ಅಕ್ಷರ ಗಾತ್ರ

ಬೀದರ್: ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿ ಮಾಡಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರಾಥಮಿಕ ಶಾಲಾ ಶಿಕ್ಷಕರು ನಗರದಲ್ಲಿ ಸೋಮವಾರ ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾ ಗುರು ಭವನದಲ್ಲಿ ಸೇರಿದ ನೌಕರರು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ಘೋಷಣೆ ಕೂಗುತ್ತ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ವರೆಗೆ ಮೆರವಣಿಗೆ ನಡೆಸಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

ಸೇವಾ ಅವಧಿಯಲ್ಲಿ ಶಿಕ್ಷಕರು ಬಯಸುವ ಜಿಲ್ಲೆಗೆ ಒಂದು ಬಾರಿ ವರ್ಗಾವಣೆ ಮಾಡಬೇಕು. ಮುಖ್ಯ ಶಿಕ್ಷಕರಿಗೆ 15, 20, 25 ವರ್ಷಗಳ ವೇತನ ಬಡ್ತಿ ನೀಡಬೇಕು. ನೂತನ ಪಿಂಚಣಿ ಯೋಜನೆ ರದ್ದುಪಡಿಸಬೇಕು. ಪದವೀಧರ ಶಿಕ್ಷಕರು, ಗ್ರಾಮೀಣ ಕೃಪಾಂಕ ಶಿಕ್ಷಕರು, ದೈಹಿಕ ಶಿಕ್ಷಕರು ಹಾಗೂ ಹಿಂದಿ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಆಗ್ರಹಿಸಿದರು.

ಸಂಘದ ಕೇಂದ್ರ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವಿವಿಧ ಹಂತಗಳಲ್ಲಿ ಹೋರಾಟ ನಡೆಸಲಾಗುತ್ತಿದೆ. ಸರ್ಕಾರ ಸ್ಪಂದಿಸದಿದ್ದರೆ ತೀವ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರವೀಂದ್ರರೆಡ್ಡಿ ಎನ್. ಮಾಲಿಪಾಟೀಲ, ಉಪಾಧ್ಯಕ್ಷರಾದ ಪಂಢರಿ ಆಡೆ, ನಿರ್ಮಲಾ ಚಲ್ವಾ, ಪ್ರಧಾನ ಕಾರ್ಯದರ್ಶಿ ಪ್ರಭುಲಿಂಗ ತೂಗಾವೆ, ಸಹ ಕಾರ್ಯದರ್ಶಿಗಳಾದ ಅಬ್ದುಲ್ ಸತ್ತಾರ್, ಸುಮತಿ, ಸಂಘಟನಾ ಕಾರ್ಯದರ್ಶಿ ರಂಗರಾವ್, ರಾಜಮತಿ ಕೊರಾಳೆ, ಕೋಶಾಧ್ಯಕ್ಷ ಅಲ್ಲಾವುದ್ದಿನ್ ಪಟೇಲ್, ತಾಲ್ಲೂಕು ಘಟಕಗಳ ಅಧ್ಯಕ್ಷರಾದ ರಾಜು ಸಾಗರ, ಜಗನ್ನಾಥ ಪತಂಗೆ, ಸೂರ್ಯಕಾಂತ ಸುಂಟೆ, ಮುರುಘೇಂದ್ರ, ರಾಜಪ್ಪ ಜಮಾದಾರ್, ಗಜಾನನ, ಬಸವರಾಜ ಪಾಟೀಲ, ರಾಜಪ್ಪ ನಂದೋಡೆ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT