ಬುಧವಾರ, ನವೆಂಬರ್ 20, 2019
22 °C

ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ನಾಳೆ

Published:
Updated:

ಬೀದರ್: 2018-19ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದ ಕಡ್ಡಾಯ ಮತ್ತು ಪರಸ್ಪರ ವರ್ಗಾವಣೆ ಕೌನ್ಸೆಲಿಂಗ್ ಸೆ.7 ಮತ್ತು 11 ರಂದು ಇಲ್ಲಿಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯ ಎಸ್.ಎಸ್.ಎ ಸಭಾಂಗಣದಲ್ಲಿ ನಡೆಯಲಿದೆ.

ಶಿಕ್ಷಕರು ವರ್ಗಾವಣೆ ಅರ್ಜಿ ಹಾಗೂ ಮೂಲ ದಾಖಲೆಗಳೊಂದಿಗೆ ನಿಗದಿತ ದಿನಾಂಕಗಳಂದು ಕೌನ್ಸೆಲಿಂಗ್‌ಗೆ ಹಾಜರಾಗಬೇಕು. ಕಡ್ಡಾಯ ವರ್ಗಾವಣೆಯ ಶಿಕ್ಷಕರು ಹಾಜರಾಗದಿದ್ದಲ್ಲಿ ಡಮ್ಮಿ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿಗೊಳಿಸಲಾಗುವುದು.

ಕಡ್ಡಾಯ ವರ್ಗಾವಣೆ ಕೌನ್ಸೆಲಿಂಗ್ ಸೆ.7ರಂದು ಜೇಷ್ಠತಾ ಪಟ್ಟಿ ಕ್ರಮ ಸಂಖ್ಯೆ 1ರಿಂದ 83ರ ವರೆಗೆ ಹಾಗೂ ಪರಸ್ಪರ ವರ್ಗಾವಣೆ ಕೌನ್ಸೆಲಿಂಗ್ ಸೆ.11ರಂದು ಕ್ರಮ ಸಂಖ್ಯೆ 1ರಿಂದ ಪೂರ್ಣಗೊಳ್ಳುವವರೆಗೂ ನಡೆಸಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)