ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸಪ್ರಶ್ನೆ ಸ್ಪರ್ಧೆ: ಸಾಯಿ ಸ್ಫೂರ್ತಿ ಕಾಲೇಜು ತಂಡ ಪ್ರಥಮ

Last Updated 10 ಅಕ್ಟೋಬರ್ 2021, 8:21 IST
ಅಕ್ಷರ ಗಾತ್ರ

ಬೀದರ್: ಸೇವೆ ಮತ್ತು ಸಮರ್ಪಣೆ ಅಭಿಯಾನ ಪ್ರಯುಕ್ತ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕವು ಇಲ್ಲಿಯ ಸಾಯಿ ಸ್ಫೂರ್ತಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಜೀವನ ಮತ್ತು ಸಾಧನೆ ಕುರಿತ ಜಿಲ್ಲಾಮಟ್ಟದ ‘ನಮೋ ರಸಪ್ರಶ್ನೆ ಸ್ಪರ್ಧೆ’ಯಲ್ಲಿ ಸಾಯಿ ಸ್ಫೂರ್ತಿ ಕಾಲೇಜು ತಂಡ ಪ್ರಥಮ ಸ್ಥಾನ ಗಳಿಸಿದೆ.

ಬೀದರ್‌ ತಾಲ್ಲೂಕಿನ ಮನ್ನಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜು ತಂಡ ದ್ವಿತೀಯ ಹಾಗೂ ಬೀದರ್‌ನ ಬಿ.ವಿ. ಭೂಮರಡ್ಡಿ ಕಾಲೇಜು ತಂಡ ತೃತೀಯ ಸ್ಥಾನ ಪಡೆದಿದೆ.

ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಗಳಿಸಿದ ತಂಡಗಳಿಗೆ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ ಅವರ ಪ್ರಾಯೋಜಕತ್ವದಲ್ಲಿ ಕ್ರಮವಾಗಿ ₹ 5 ಸಾವಿರ, ₹ 3 ಸಾವಿರ ಹಾಗೂ ₹ 2 ಸಾವಿರ ನಗದು ಬಹುಮಾನ, ಪ್ರಮಾಣ ಪತ್ರ ಹಾಗೂ ದೀನ ದಯಾಳ್ ಉಪಾಧ್ಯಾಯರ ಭಾವಚಿತ್ರ ವಿತರಿಸಲಾಯಿತು. ತಲಾ ಐವರನ್ನು ಒಳಗೊಂಡ 8 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು.

ರಸಪ್ರಶ್ನೆ ಸ್ಪರ್ಧೆ ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ಪಾಟೀಲ ಶೇಕಾಪುರ ಅವರು, ಮೋದಿ ಅವರ 71ನೇ ಜನ್ಮದಿನದ ಪ್ರಯುಕ್ತ ಸೇವೆ ಮತ್ತು ಸಮರ್ಪಣೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ಯುವ ಮೋರ್ಚಾದಿಂದ ಈಗಾಗಲೇ ಅನೇಕ ಸಾಮಾಜಿಕ ಚಟುವಟಿಕೆಗಳನ್ನು ನಡೆಸಲಾಗಿದೆ. ಮೋದಿ ಅವರ ಜೀವನ ಮತ್ತು ಸಾಧನೆಗಳ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್ ಅವರು ಸ್ಪರ್ಧೆಯ ಬಹುಮಾನ ವಿತರಣೆ ಸಮಾರಂಭವನ್ನು ಉದ್ಘಾಟಿಸಿದರು. ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪುರೆ, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ, ಬಿಜೆಪಿ ಕಲಬುರ್ಗಿ ವಿಭಾಗ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ್, ನಗರಸಭೆ ಸದಸ್ಯರಾದ ರಾಜಾರಾಮ ಚಿಟ್ಟಾ, ಶಶಿಧರ ಹೊಸಳ್ಳಿ, ಬಿಜೆಪಿ ನಗರ ಘಟಕದ ಅಧ್ಯಕ್ಷ ಹಣಮಂತ ಬುಳ್ಳಾ, ಯುವ ಮೋರ್ಚಾ ಜಿಲ್ಲಾ ಘಟಕದ ಉಪಾಧ್ಯಕ್ಷ ಶಿವಕುಮಾರ ಸ್ವಾಮಿ, ರಾಜೇಶ ಪಾಟೀಲ, ಅಮರ ಬಡದಾಳೆ, ಹೇಮಲತಾ ಜೋಶಿ, ರವೀಂದ್ರ ಬಲ್ಲೆಬಾಯಿ ಕಾಶೆಂಪೂರ, ಪ್ರಾಚಾರ್ಯ ಚಂದ್ರಶೇಖರ ಬಿರಾದಾರ, ಸಾಗರ್ ಪಾಠಕ್, ಸಂತೋಷ ನಾಯಕ್ ಉಪಸ್ಥಿತರಿದ್ದರು.

ಯುವ ಮೋರ್ಚಾ ಜಿಲ್ಲಾ ಘಟಕದ ಕಾರ್ಯದರ್ಶಿ ವೀರೇಶ ಸ್ವಾಮಿ ನಿರೂಪಿಸಿದರು. ಉಪಾಧ್ಯಕ್ಷ ಜನಾರ್ಧನ ರೆಡ್ಡಿ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT