ಭಾನುವಾರ, ಜನವರಿ 19, 2020
27 °C
ವಿವಿಧ ಕಾಮಗಾರಿಗಳಿಗೆ ಶಾಸಕರಿಂದ ಭೂಮಿಪೂಜೆ

ಕ್ಷೇತ್ರದ ಪ್ರತಿ ಗ್ರಾಮದಲ್ಲೂ ಮೂಲ ಸೌಕರ್ಯಕ್ಕೆ ಆದ್ಯತೆ: ಹಿಟ್ನಾಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಪ್ಪಳ: ಕ್ಷೇತ್ರದ ಪ್ರತಿ ಗ್ರಾಮಕ್ಕೂ ₹ 5 ಕೋಟಿಯಿಂದ ಸುಮಾರು ₹ 20 ಕೋಟಿಯವರೆಗೂ ಅನುದಾನ ಒದಗಿಸಿ, ಮೂಲ ಸೌಕರ್ಯ ಕಲ್ಪಿಸಲಾಗುತ್ತಿದೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.

ತಾಲ್ಲೂಕಿನ ಗೊಂಡಬಾಳ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಭಾನುವಾರ ನಡೆದ ಕಲ್ಮಲಾ-ಶಿಗ್ಗಾಂವ (ಎಸ್.ಹೆಚ್.23) 5054 ಯೋಜನೆಯ ಅಡಿ ಕೈಗೊಳ್ಳಲಾಗಿರುವ ವಿವಿಧ ರಸ್ತೆ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಬರುವ ಆರ್ಥಿಕ ವರ್ಷದಲ್ಲಿ ಸರ್ಕಾರದಿಂದ ಸುಮಾರು ₹ 1 ಸಾವಿರ ಕೋಟಿ ಅನುದಾನ ಮಂಜೂರು ಮಾಡಿಸಿ, ಗ್ರಾಮಗಳ ಜತೆಗೆ ನಗರದ ಅಭಿವೃದ್ಧಿಗೆ ಹೆಚ್ಚು ಒತ್ತುಕೊಟ್ಟು ಗ್ರಾಮಗಳ ಸೌಂದರ್ಯವನ್ನು ಹೆಚ್ಚಿಸಲಾಗುವುದು ಎಂದರು.

ಮುದ್ದಾಬಳ್ಳಿ, ಗೊಂಡಬಾಳ ಹಾಗೂ ಹಿರೇಸಿಂದೋಗಿ ಗ್ರಾಮಗಳಲ್ಲಿನ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಗೂಳಪ್ಪ ಹಲಗೇರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಭೂಮರಡ್ಡಿ, ಕೆ.ಓ.ಎಫ್ ಅಧ್ಯಕ್ಷ ಸುರೇಶರಡ್ಡಿ ಮಾದಿನೂರ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಾಲಚಂದ್ರನ್, ಸದಸ್ಯರಾದ ರಾಜೀವರಡ್ಡಿ, ನಿಂಗಪ್ಪ ಯತ್ನಟ್ಟಿ, ನಗರಸಭಾ ಸದಸ್ಯ ಅಕ್ಬರ್ ಪಾಷಾ ಪಲ್ಟನ್, ಮುಖಂಡರಾದ ಬಸವರಡ್ಡೆಪ್ಪ ಹಳ್ಳಿಕೇರಿ, ಪ್ರಸನ್ನ ಗಡಾದ, ನವೋದಯ ವಿರುಪಣ್ಣ, ಕೇಶವರಡ್ಡಿ, ಕೃಷ್ಣಾರಡ್ಡಿ ಗಲಿಬಿ ಇದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು