ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ: ಶಾಸಕ ರಾಜಶೇಖರ ಪಾಟೀಲ

chitaguppa
Last Updated 28 ಮಾರ್ಚ್ 2023, 12:33 IST
ಅಕ್ಷರ ಗಾತ್ರ

ಚಿಟಗುಪ್ಪ: ‘ಹುಮನಾಬಾದ್ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಸರ್ಕಾರಿ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಲಾಗಿದೆ’ ಎಂದು ಶಾಸಕ ರಾಜಶೇಖರ ಪಾಟೀಲ ಹೇಳಿದರು.

ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ಸಹಯೋಗದಲ್ಲಿ ಪಟ್ಟಣದಲ್ಲಿ ಪಿಎಂಎವೈ ಯೋಜನೆಯ ಬಡ ವಸತಿ ರಹಿತ ಫಲಾನುಭವಿಗಳ 545 ಮನೆಗಳ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

ಹುಮನಾಬಾದ್‌ ಹಾಗೂ ಚಿಟಗುಪ್ಪವನ್ನು ಅವಳಿ ಪಟ್ಟಣಗಳನ್ನಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಏಕಕಾಲಕ್ಕೆ ಎರಡು ಪಟ್ಟಣಗಳಲ್ಲಿ ಸಮಾನವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗಿದೆ. ನಾಗರಿಕರಿಗೆ ಮೂಲ ಸೌಕರ್ಯ ಒದಗಿಸಲು ಶ್ರಮಿಸಲಾಗುತ್ತಿದೆ ಎಂದರು.

ಪುರಸಭೆ ಅಧ್ಯಕ್ಷೆ ಮಾಲಾಶ್ರೀ ಶಾಮರಾವ್‌, ಉಪಾಧ್ಯಕ್ಷೆ ಸೌಭಾಗ್ಯ ಸ್ವಾಮಿ, ಹಿರಿಯ ಪುರಸಭೆ ಸದಸ್ಯ ದಿಲೀಪಕುಮಾರ ಬಗ್ದಲಕರ್‌, ಪುರಸಭೆಯ ಕಾಂಗ್ರೆಸ್‌ ಸದಸ್ಯರು ಹಾಗೂ ಗಣ್ಯರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT