ಶನಿವಾರ, ಜನವರಿ 22, 2022
16 °C

ಸಿದ್ಧೇಶ್ವರ ಕ್ಷೇತ್ರ ಅಭಿವೃದ್ಧಿಗೆ ಸಂಕಲ್ಪ: ಬೇಮಳಖೇಡದ ರಾಜಶೇಖರ ಶಿವಾಚಾರ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಮಲಗಿ ಬೆಟ್ಟದ ಶ್ರೀ ಸಿದ್ಧೇಶ್ವರ ಕ್ಷೇತ್ರದ ಸರ್ವಾಂಗೀಣ ವಿಕಾಸಕ್ಕೆ ಸಂಕಲ್ಪ ತೊಡಲಾಗಿದೆ ಎಂದು ಬೇಮಳಖೇಡದ ರಾಜಶೇಖರ ಶಿವಾಚಾರ್ಯ ಹೇಳಿದರು.

ಇಲ್ಲಿಗೆ ಸಮೀಪದ ಮಲಗಿ ಬೆಟ್ಟದಲ್ಲಿ ನಡೆದ ಕಾರ್ತಿಕ ದೀಪೋತ್ಸವದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.

ಭಕ್ತರ ಸಹಯೋಗದೊಂದಿಗೆ ಕ್ಷೇತ್ರದಲ್ಲಿ ಸಿಸಿ ರಸ್ತೆ, ವಿದ್ಯುತ್ ದೀಪ, ಮಹಾದ್ವಾರ ನಿರ್ಮಾಣ ಮೊದಲಾದ ಕಾರ್ಯಗಳನ್ನು ಹಂತ ಹಂತವಾಗಿ ಕೈಗೊಳ್ಳಲು ನಿರ್ಧರಿಸಲಾಗಿದೆ. ಕ್ಷೇತ್ರದ ಸಮಗ್ರ ವಿಕಾಸಕ್ಕೆ ಬರುವ ದಿನಗಳಲ್ಲಿ ನಿಯೋಗದಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರರಾವ್ ಅವರನ್ನೂ ಭೇಟಿ ಮಾಡಲಾಗುವುದು ಎಂದು ತಿಳಿಸಿದರು.

ಕ್ಷೇತ್ರದ ಅಭಿವೃದ್ಧಿಯ ಮೊದಲ ಹಂತವಾಗಿ ಪ್ರತಿ ಅಮಾವಾಸ್ಯೆಯಂದು ಸಿದ್ಧೇಶ್ವರ ದೇವರಿಗೆ ರುದ್ರಾಭಿಷೇಕ, ಅನ್ನದಾನ, ಭಜನೆ ಕಾರ್ಯಕ್ರಮಗಳನ್ನು ಆರಂಭಿಸಲಾಗುವುದು ಎಂದು ಹೇಳಿದರು.

ಬೀದರ್‌ನ ಕುಶಾಲರಾವ್ ಗೌರಶೆಟ್ಟಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಾರುತಿ, ಕಂಟೆಪ್ಪ ಭಂಗೂರೆ, ಮಾದಪ್ಪ ಭಂಗೂರೆ, ಬೀರಪ್ಪ, ಭೀಮಣ್ಣ, ಮಾರುತಿ, ಸಿದ್ಧು ರೆಡ್ಡಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು