ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌, ರಾಯಚೂರು ಮಹಾನಗರ ಪಾಲಿಕೆಗೆ ಪ್ರಸ್ತಾವ ಸಿದ್ಧ: ಸಚಿವ ರಹೀಂ ಖಾನ್‌

Published 15 ಆಗಸ್ಟ್ 2023, 10:50 IST
Last Updated 15 ಆಗಸ್ಟ್ 2023, 10:50 IST
ಅಕ್ಷರ ಗಾತ್ರ

ಬೀದರ್‌: ‘ಬೀದರ್‌, ರಾಯಚೂರು ನಗರಸಭೆಗಳನ್ನು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವ ಸಿದ್ಧಗೊಂಡಿದೆ. ಹಣಕಾಸು ಇಲಾಖೆಗೆ ಕಡತ ಕಳಿಸಿಕೊಡಲಾಗುವುದು’ ಎಂದು ಪೌರಾಡಳಿತ ಮತ್ತು ಹಜ್‌ ಖಾತೆ ಸಚಿವ ರಹೀಂ ಖಾನ್‌ ತಿಳಿಸಿದರು.

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆಯೂ ಹಣಕಾಸು ಇಲಾಖೆಗೆ ಕಡತಗಳನ್ನು ಕಳಿಸಲಾಗಿತ್ತು. ಈ ವಿಷಯ ಸಂಪುಟ ಸಭೆಯಲ್ಲೂ ಚರ್ಚೆಗೆ ಬಂದಿತ್ತು. ಆದರೆ, ಹಣಕಾಸು ಇಲಾಖೆಯು ಕೆಲವು ತಾಂತ್ರಿಕ ಕಾರಣಗಳನ್ನು ಕೊಟ್ಟು ಕಡತಗಳನ್ನು ವಾಪಸ್‌ ಕಳಿಸಿತ್ತು. ಈಗ ಹೊಸ ಪ್ರಸ್ತಾವ ಸಿದ್ಧಪಡಿಸಿ ಕಳಿಸಲಾಗಿದೆ. ಆದಷ್ಟು ಶೀಘ್ರ ಬೀದರ್‌, ರಾಯಚೂರು ಮಹಾನಗರ ಪಾಲಿಕೆ ಆಗಲಿವೆ ಎಂದು ಹೇಳಿದರು.

ಬೀದರ್‌ ಜಿಲ್ಲೆಯಲ್ಲಿರುವ ಎಲ್ಲಾ ಉದ್ಯಾನಗಳ ಅಭಿವೃದ್ಧಿಗೆ ಅಮೃತ ಯೋಜನೆಯಡಿ ಯೋಜನೆ ರೂಪಿಸಲಾಗಿದೆ. ಒಂದು ತಿಂಗಳ ನಂತರ ಎಲ್ಲಾ ಉದ್ಯಾನಗಳನ್ನು ಅಭಿವೃದ್ಧಿ ಪಡಿಸುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT