ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಸರ ನೈರ್ಮಲ್ಯ ಕಾಪಾಡಿಕೊಳ್ಳಿ

ನಗರಸಭೆ ಅಧ್ಯಕ್ಷೆ ಶಾಲಿನಿ ಚಿಂತಾಮಣಿ ಹೇಳಿಕೆ
Last Updated 6 ಡಿಸೆಂಬರ್ 2018, 15:43 IST
ಅಕ್ಷರ ಗಾತ್ರ

ಬೀದರ್: ‘ಪ್ರತಿಯೊಬ್ಬರು ಆರೋಗ್ಯವಂತರಾಗಿರಲು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು’ ಎಂದು ನಗರಸಭೆ ಅಧ್ಯಕ್ಷೆ ಶಾಲಿನಿ ಚಿಂತಾಮಣಿ ಹೇಳಿದರು.

ಕಲಬುರ್ಗಿ-ಬಳ್ಳಾರಿಯ ಕ್ಷೇತ್ರ ಜನ ಸಂಪರ್ಕ ಕಾರ್ಯಾಲಯ, ನಗರ ಸಭೆ, ಶಿಶು ಅಭಿವೃದ್ಧಿ ಯೋಜನೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಪನ್ನಾಲಾಲ್ ಹೀರಾಲಾಲ್ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯ ಹಾಗೂ ಪ್ರೌಢ ಶಾಲೆಯ ಆಶ್ರಯದಲ್ಲಿ ಗುರುವಾರ ಆಯೋಜಿಸಿದ್ದ ಸ್ವಚ್ಛ ಭಾರತ ಅಭಿಯಾನ ವಿಶೇಷ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ನಗರದಲ್ಲಿ ಸ್ವಚ್ಛತೆ ಕಾಪಾಡಲು ಪ್ರತಿಮನೆಯಿಂದ ಕಸವನ್ನು ಸಂಗ್ರಹಿಸಲಾಗುತ್ತಿದೆ. ಸಾರ್ವಜನಿಕರು ತಮ್ಮ ಮನೆಯಲ್ಲಿನ ಕಸವನ್ನು ರಸ್ತೆಯ ಬದಿಯಲ್ಲಿ ಎಸೆಯದೆ ನಗರಸಭೆಯ ವಾಹನದಲ್ಲಿ ಹಾಕಿ ಸ್ವಚ್ಛತಾ ಕಾರ್ಯಕ್ಕೆ ಸಹಕರಿಸಬೇಕು’ ಎಂದು ಮನವಿ ಮಾಡಿದರು.

‘ಸ್ವಚ್ಛ ಭಾರತ ಅಭಿಯಾನದ ಜಿಲ್ಲಾ ನೋಡಲ್ ಅಧಿಕಾರಿ ಡಾ.ಗೌತಮ ಅರಳಿ ಮಾತನಾಡಿ, ‘ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಶೌಚಾಲಯ ನಿರ್ಮಿಸಿಕೊಳ್ಳಲು ಸರ್ಕಾರದಿಂದ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಪ್ರತಿಯೊಬ್ಬರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.

ಎನ್‍ಎಸ್‍ಎಸ್ ಅಧಿಕಾರಿ ಬಸವರಾಜ ಬುಳ್ಳಾ ಅವರು ಸ್ವಚ್ಛ ಭಾರತ ಅಭಿಯಾನದ ಕುರಿತು ಮಾತನಾಡಿದರು. ಆರ್.ಬಿ.ಎಸ್.ಎಸ್ ಸಂಯುಕ್ತ ಪದವಿ ಪೂರ್ವ ಕಾಲೇಜು ಅಧ್ಯಕ್ಷ ನಂದ ಕಿಶೋರಜಿ ವರ್ಮಾ ಅಧ್ಯಕ್ಷತೆ ವಹಿಸಿದ್ದರು. ಕಲಬುರ್ಗಿ-ಬಳ್ಳಾರಿಯ ಕ್ಷೇತ್ರ ಜನ ಸಂಪರ್ಕ ಕಾರ್ಯಾಲಯದ ಉಪ ನಿರ್ದೇಶಕ ಡಾ.ಜಿ.ಡಿ.ಹಳ್ಳಿಕೇರಿ, ನಗರಸಭೆ ಸದಸ್ಯ ದೀಪಕ ಪುಂಡಲೀಕ, ಕಿಶೋರ ವರ್ಮಾ, ಸಂಸ್ಥೆಯ ರಾಜಕುಮಾರ ಅಗ್ರವಾಲ್, ರಾಜೇಂದ್ರ ಸಿಂಗ್ ಪವಾರ, ಸತ್ಯನಾರಾಯಣ, ಘನಶ್ಯಾಮ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಚೇಂದ್ರ ವಾಘಮೋರೆ, ಪ್ರಾಚಾರ್ಯ ವೈ.ಎಚ್.ಹೊಸಮನಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ತನ್ವೀರ್ ಇಕ್ಬಾಲ್ ಇದ್ದರು.

ಕಾರ್ಯಕ್ರಮದ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಭಾಷಣ, ರಂಗೋಲಿ ಹಾಗೂ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಎನ್.ರಾಮಕೃಷ್ಣಪ್ಪ ಸ್ವಾಗತಿಸಿದರು. ನಾಗಪ್ಪ ಅಂಬಾಗೋಳ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT