ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳೆ ನಷ್ಟ: ಸೂಕ್ತ ಪರಿಹಾರಕ್ಕೆ ರೈತರ ಒತ್ತಾಯ

ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದಿಂದ ಮನವಿ ಸಲ್ಲಿಕೆ
Last Updated 21 ಮಾರ್ಚ್ 2023, 5:04 IST
ಅಕ್ಷರ ಗಾತ್ರ

ಬೀದರ್‌: ಅಕಾಲಿಕ ಮಳೆಯಿಂದ ಕೃಷಿ ಹಾಗೂ ತೋಟಗಾರಿಕೆ ಬೆಳೆ ನಷ್ಟ ಅನುಭವಿಸಿದ ರೈತರಿಗೆ ತಕ್ಷಣ ಸೂಕ್ತ ಪರಿಹಾರ ಕೊಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕ ಆಗ್ರಹಿಸಿದೆ.

ಆಲಿಕಲ್ಲು ಮಳೆಗೆ ಜೋಳ, ಕುಸುಬೆ, ಗೋಧಿ, ತೋಟಗಾರಿಕೆ ಬೆಳೆಗಳಾದ ಮಾವು, ಕಲ್ಲಂಗಡಿ, ಬಾಳೆ, ತರಬೂಜ್‌ ಹಾಗೂ ತರಕಾರಿ ಬೆಳೆಗಳು ಸಂಪೂರ್ಣ ಹಾಳಾಗಿವೆ. ಸಂಕಷ್ಟದಲ್ಲಿರುವ ರೈತರಿಗೆ ತಕ್ಷಣ ಪರಿಹಾರ ಕೊಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ರಾಮಪ್ಪ ಅಣದೂರೆ ಅವರು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ನೆಟೆ ರೋಗದಿಂದ ತೊಗರಿ ಬೆಳೆ ಹಾನಿಯಾದರೂ ರೈತರಿಗೆ ಪರಿಹಾರ ದೊರಕಿಲ್ಲ. ಕಳೆದ ವರ್ಷ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಸಿದ ರೈತರಿಗೆ ಹೆಚ್ಚುವರಿಯಾಗಿ ಪ್ರತಿ ಕ್ವಿಂಟಲ್‌ಗೆ ₹ 50 ಕೊಡಿಸುವ ವ್ಯವಸ್ಥೆ ಮಾಡಿಸಬೇಕು. ₹ 5 ಲಕ್ಷದ ವರೆಗೆ ಶೂನ್ಯ ಬಡ್ಡಿಯಲ್ಲಿ ರೈತರಿಗೆ ಸಾಲ ಕೊಡಬೇಕು ಎಂದು ಮನವಿ ಮಾಡಿದರು.

ಮುಂಗಾರು ಮತ್ತು ಹಿಂಗಾರು ಹಂಗಾಮಿನ ಬೆಳೆಗಳಿಗೆ ಬೆಳೆ ವಿಮೆ ಕಟ್ಟಿರುವ ರೈತರಿಗೆ ವಿಮೆ ಹಣ ಕೊಡಬೇಕು. ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು. ರೈತ ವಿರೋಧಿ ಮೂರು ಕೃಷಿ ಮಸೂದೆಗಳನ್ನು ಹಿಂದಕ್ಕೆ ಪಡೆಯಬೇಕು. ಕಾಡು ಪ್ರಾಣಿಗಳಿಂದ ರೈತರ ಬೆಳೆ ನಷ್ಟ ಆಗುತ್ತಿರುವುದನ್ನು ತಪ್ಪಿಸಬೇಕು. ಕಾರಂಜಾ ಸಂತ್ರಸ್ತರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಶ್ರೀಮಂತ ಬಿರಾದಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಸ್ವಾಮಿ ಸಿರ್ಸಿ, ಶಂಕರೆಪ್ಪ ಪಾರಾ, ಬಾಬುರಾವ್ ಜೋಳದಾಬಕೆ, ಶೇಷರಾವ್ ಕಣಜಿ, ನಾಗಯ್ಯಾ ಸ್ವಾಮಿ, ಸುಭಾಷ ರಗಟೆ, ಪ್ರಕಾಶ ಬವಗೆ, ಸತೀಶ, ಲಕ್ಷ್ಮಣರಾವ್, ಪ್ರವೀಣ, ನಾಗಶೆಟ್ಟೆಪ್ಪ ಹಾಗೂ ಮಲ್ಲಿಕಾರ್ಜುನ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT