ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಶಾ ಕಾರ್ಯಕರ್ತೆಯರ ಪ್ರತಿಭಟನೆ

Last Updated 28 ಡಿಸೆಂಬರ್ 2019, 10:35 IST
ಅಕ್ಷರ ಗಾತ್ರ

ಔರಾದ್: ಕನಿಷ್ಠ ಗೌರವಧನ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಾಲ್ಲೂಕಿನ ಆಶಾ ಕಾರ್ಯಕರ್ತೆಯರು ಪಟ್ಟಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಹೇಶ ನಾಡಗೌಡ, ಜಂಟಿ ಕಾರ್ಯದರ್ಶಿ ರೇಷ್ಮಾ ಅವರ ನೇತೃತ್ವದಲ್ಲಿ ನೂರಾರು ಆಶಾ ಕಾರ್ಯಕರ್ತೆಯರು ಪಟ್ಟಣದ ಕನ್ನಡಾಂಬೆ ವೃತ್ತದಿಂದ ತಾಲ್ಲೂಕು ಸರ್ಕಾರಿ ಆಸ್ಪತ್ರೆವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

‘ಆಶಾ ಕಾರ್ಯಕರ್ತೆಯರು ಕಳೆದ ಒಂದು ದಶಕದಿಂದ ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಸೌಲಭ್ಯಗಳನ್ನು ಜನರಿಗೆ ಮುಟ್ಟಿಸುವಲ್ಲಿ ಶ್ರಮಪಡುತ್ತಿದ್ದಾರೆ. ಆದರೆ ಅವರಿಗೆ ಇಲ್ಲಿಯ ತನಕ ಕನಿಷ್ಠ ವೇತನ ನಿಗದಿ ಮಾಡಿಲ್ಲ’ ಎಂದು ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಘಕಟದ ಅಧ್ಯಕ್ಷ ಮಹೇಶ ನಾಡಗೌಡ ದೂರಿದರು.

₹12 ಸಾವಿರ ಮಾಸಿಕ ಗೌರವಧನ ನಿಗದಿ ಮಾಡಬೇಕು. 15 ತಿಂಗಳ ಬಾಕಿ ಗೌರವಧನವನ್ನು ತಕ್ಷಣ ಬಿಡುಗಡೆ ಮಾಡಬೇಕು. ಅಂಗನವಾಡಿ ಕಾರ್ಯಕರ್ತೆಯರಿಗೆ ಇರುವಂತೆ ಆಶಾ ಕಾರ್ಯಕರ್ತೆಯರಿಗೂ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸಬೇಕು. ದ್ವಿಚಕ್ರ ವಾಹನ ಖರೀದಿಗೆ ಸಾಲದ ಸೌಲಭ್ಯ ಕಲ್ಪಿಸಬೇಕು ಎಂದು
ಆಗ್ರಹಿಸಿ ತಹಶೀಲ್ದಾರ್ ಎಂ. ಚಂದ್ರಶೇಖರ ಅವರಿಗೆ ಬೇಡಿಕೆ ಪತ್ರ ಸಲ್ಲಿಸಿದರು. ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಶರಣಯ್ಯ ಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT