ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

Last Updated 14 ನವೆಂಬರ್ 2022, 14:53 IST
ಅಕ್ಷರ ಗಾತ್ರ

ಹುಲಸೂರ: ನಿಲಯ ಪಾಲಕರ ವರ್ಗಾವಣೆ ರದ್ದು ಮಾಡಬೇಕು. ಗುಣಮಟ್ಟದ ಆಹಾರ ನೀಡಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಟ್ಟಣ ಹೊರವಲಯದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಶಾಲೆ ಮುಂಭಾಗದ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಶಿಕ್ಷಕರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸುತ್ತಾರೆ. ಶೋಷಣೆ ವಿರೋಧಿಸುವ ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಮಾನಸಿಕ ಹಿಂಸೆ ನೀಡುತ್ತಾರೆ. ಇದೆಲ್ಲವನ್ನು ತಡೆಯಬೇಕು ಹಾಗೂ ಖಾಯಂ ಶಿಕ್ಷಕರ ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.

ಬೆಳಿಗ್ಗೆ 11 ಗಂಟೆಯವರೆಗೂ ಬಿಸಿಲಿನಲ್ಲಿಯೇ ಕುಳಿತಿದ್ದರು. ಸ್ಥಳಕ್ಕೆ ತಹಶೀಲ್ದಾರ್ ಶಿವಾನಂದ ಮೇತ್ರೆ ಭೇಟಿ ನೀಡಿ ಸಮಸ್ಯೆ ಆಲಿಸಿದರು.

‘ಮಕ್ಕಳ ದಿನಾಚರಣೆಯಂದೇ ಮಕ್ಕಳು ಬೀದಿಗೆ ಬಂದು ಹೋರಾಟ ಮಾಡುತ್ತಿರುವುದು ದುರದೃಷ್ಟಕರ. ಸಮಸ್ಯೆ ಆಲಿಸಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಶೀಘ್ರದಲ್ಲೇ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಾಗುವುದು’ ಎಂದರು.

ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ ಹಲವು ವರ್ಷಗಳಿಂದ ಸಮಸ್ಯೆಗಳಿವೆ. ಶಿಕ್ಷಕರಲ್ಲಿ ಗುಂಪುಗಾರಿಕೆಯಿಂದ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾ ಗುತ್ತಿದೆ. ಬೋಧಕೇತರ ಸಿಬ್ಬಂದಿಯನ್ನು ನಿಲಯ ಪಾಲಕರಾಗಿ ನೇಮಕ ಮಾಡುವುದು ಉತ್ತಮ ಎಂದು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯ ರಾಜಕುಮಾರ ತೊಂಡಾರೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT