ಬೀದರ್: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಸ್ಟುಡೆಂಟ್ಸ್ ಇಸ್ಲಾಮಿಕ್ ಆರ್ಗನೈಜೇಶನ್ ಆಫ್ ಇಂಡಿಯಾ(ಎಸ್‌ಐಒ)ದ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಅಕೀಬ್ ಹುಸೇನ್ ನೇತೃತ್ವದಲ್ಲಿ ಕಾರ್ಯಕರ್ತರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಡಾ.ಎಚ್.ಆರ್.ಮಹಾದೇವ ಅವರಿಗೆ ನೀಡಿದರು.

ಪೌರತ್ವ ತಿದ್ದುಪಡಿ ಕಾಯ್ದೆಯು ಸಂವಿಧಾನದ ಪರಿಚ್ಛೇದ 5, 11 ಹಾಗೂ 14 ಉಲ್ಲಂಘನೆಯಾಗಿದ್ದು ಇದು ಧರ್ಮಾಧಾರಿತವಾಗಿ ವಿಭಜಿಸಿ ವೋಟ್ ಬ್ಯಾಂಕ್ ಭದ್ರಪಡಿಸುವುದಕ್ಕೆ ಕೇಂದ್ರ ಸರ್ಕಾರವು ರೂಪಿಸಿರುವ ಷಡ್ಯಂತ್ರವಾಗಿದೆ ಎಂದು ಆರೋಪಿಸಿದರು.

ಭಾರತದ ಜಾತ್ಯತೀಯತ ಆತ್ಮವನ್ನು ಕೊಲ್ಲುವ ಪ್ರಯತ್ನದ ಭಾಗವಾಗಿ ಪೌರತ್ವ ತಿದ್ದುಪಡಿ ತರಲಾಗುತ್ತಿದೆ.
ವಿಭಜನಕಾರಿ ಕಾಯ್ದೆಯನ್ನು ತಕ್ಷಣ ಹಿಂದಕ್ಕೆ ಪಡೆಬೇಕು ಎಂದು ಒತ್ತಾಯಿಸಿದರು.

ನಗರದ ಅಂಬೇಡ್ಕರ್ ವೃತ್ತದಲ್ಲಿ ಸೇರಿಸಿದ್ದ ಎಸ್‌ಐಒ ಕಾರ್ಯಕರ್ತರು ಪೊಲೀಸರಿಂದ ಪೂರ್ವಾನುಮತಿ ಪಡೆಯದ ಕಾರಣ ಪೊಲೀಸರು ಅವರಿಗೆ ಮೆರವಣಿಗೆ ನಡೆಸಲು ಅವಕಾಶ ನೀಡಲಿಲ್ಲ. ಹೀಗಾಗಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ಬಂದು ಮನವಿಪತ್ರ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.