ಮಂಗಳವಾರ, ಸೆಪ್ಟೆಂಬರ್ 21, 2021
29 °C
ಮೃತರ ಕುಟುಂಬಕ್ಕೆ ₹25 ಲಕ್ಷ ಪರಿಹಾರಕ್ಕೆ ಆದಿಜಾಂಬವ ಸಂಘದ ಪದಾಧಿಕಾರಿಗಳ ಆಗ್ರಹ

ಬೀದರ್: ದಲಿತ ಮುಖಂಡನ ಹತ್ಯೆ ಖಂಡಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಬೂದಿಹಾಳ ಪಿ.ಎಚ್. ಗ್ರಾಮದ ದಲಿತ ಮುಖಂಡ ಅನಿಲ ಇಂಗಳಗಿ ಹತ್ಯೆ ಖಂಡಿಸಿ ಕರ್ನಾಟಕ ರಾಜ್ಯ ಆದಿಜಾಂಬವ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಅಂಬೇಡ್ಕರ್ ವೃತ್ತದಿಂದ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ಮಲ್ಲಿಕಾರ್ಜುನ ದೇವಸ್ಥಾನದ ಕಟ್ಟೆ ಮೇಲೆ ಮೇಲ್ಜಾತಿಯವರಿಗೆ ಸರಿಸಮನಾಗಿ ಕುಳಿತಿದ್ದಕ್ಕೆ ಅನಿಲ್‍ನನ್ನು ಮಾರಕಾಸ್ತ್ರದಿಂದ ಹೊಡೆದು ಹತ್ಯೆ ಮಾಡಲಾಗಿದೆ ಎಂದು ಆಪಾದಿಸಿದರು.

ವಿಜಯಪುರ ಜಿಲ್ಲಾಧಿಕಾರಿ ಈವರೆಗೂ ಘಟನಾ ಸ್ಥಳಕ್ಕೆ ಭೇಟಿ ನೀಡದಿರುವುದು ಬೇಸರ ಉಂಟು ಮಾಡಿದೆ ಎಂದು ಹೇಳಿದರು.

ರಾಜ್ಯದಲ್ಲಿ ದಲಿತರ ಮೇಲೆ ದೌರ್ಜನ್ಯ, ಹಲ್ಲೆ, ಕೊಲೆ ಪ್ರಕರಣಗಳು ನಡೆಯುತ್ತಲೇ ಇದ್ದರೂ ಸರ್ಕಾರ ನಿದ್ರೆಯಲ್ಲಿ ಇದೆ ಎಂದು ಟೀಕಿಸಿದರು.

ಕೊಲೆ ಆರೋಪಿಗಳನ್ನು ಕೂಡಲೇ ಬಂಧಿಸಿ, ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಮೃತರ ಕುಟುಂಬಕ್ಕೆ ಕನಿಷ್ಠ ₹ 25 ಲಕ್ಷ ಪರಿಹಾರ ಕೊಡಬೇಕು. ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ನೌಕರಿ, ಭೂ ಒಡೆತನ ಯೋಜನೆಯಡಿ 5 ಎಕರೆ ಭೂಮಿ ಮಂಜೂರು ಮಾಡಬೇಕು. ಇಂಗಳಗಿ ಕುಟುಂಬಕ್ಕೆ ಸೂಕ್ತ ರಕ್ಷಣೆ ಒದಗಿಸಬೇಕು. ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು. ಜಿಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಡಾ. ಬಾಬು ಜಗಜೀವನರಾಂ ಸಮುದಾಯ ಭವನ ನಿರ್ಮಿಸಬೇಕು. ನಿಟ್ಟೂರ (ಬಿ) ಗ್ರಾಮದಲ್ಲಿ ಮಾದಿಗ ಸಮುದಾಯಕ್ಕೆ ಸ್ಮಶಾನ ಭೂಮಿ ಮಂಜೂರು ಮಾಡಬೇಕು. ಬಸವಕಲ್ಯಾಣ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಾರದಾ ಕಲ್ಮಾಲಕರ್ ಅವರ ಅಮಾನತು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಕಡ್ಯಾಳ, ಕಾರ್ಯಾಧ್ಯಕ್ಷ ಅರ್ಜುನ ಕನಕ, ಉಪಾಧ್ಯಕ್ಷ ಸುಭಾಷ ವರ್ಮಾ, ಸಂಘಟಕ ಕೆ.ಎಲ್. ಹೆಗಡೆ, ಮಾದರ ಚೆನ್ನಯ್ಯ ಹೋರಾಟ ಸಮಿತಿ ರಾಜ್ಯ ಅಧ್ಯಕ್ಷ ರಮೇಶ ಕಟ್ಟಿತೂಗಾಂವ, ಹಣಮಂತ ಸೂರ್ಯವಂಶಿ, ಯಶವಂತ ಬೋರೆ, ಸುಧಾಕರ ಕೊಳ್ಳೂರ, ಯುವರಾಜ ಭೆಂಡೆ, ಬಂಟಿ, ಜೈರಾಜ ವೈದ್ಯ, ಜಿ.ಎನ್. ರಾಜು, ಅಶೋಕ ಸಂಗನೋರ ಮೊದಲಾದವರು ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು