ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂದಿ ದಿವಸ ಆಚರಣೆ ವಿರೋಧಿಸಿ ಪ್ರತಿಭಟನೆ

Last Updated 14 ಸೆಪ್ಟೆಂಬರ್ 2022, 14:00 IST
ಅಕ್ಷರ ಗಾತ್ರ

ಔರಾದ್: ಹಿಂದಿ ದಿವಸ ಆಚರಣೆ ವಿರೋಧಿಸಿ ಜೆಡಿಎಸ್ ಹಾಗೂ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಬುಧವಾರ ಇಲ್ಲಿ ಪ್ರತಿಭಟನೆ ನಡೆಸಿದರು.

ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿಪತ್ರ ರವಾನಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಯಾ ರಾಜ್ಯಗಳಿಗೆ ಪ್ರತ್ಯೇಕ ಭಾಷೆ ಬಳಕೆಗೆ ಅವಕಾಶವಿದೆ. ಆದರೆ ಸರ್ಕಾರ ರಾಜ್ಯಗಳ ಮೇಲೆ ಹಿಂದಿ ಭಾಷೆ ಹೇರಲು ಹೊರಟಿದೆ. ಹಿಂದಿ ದಿವಸ ಆಚರಣೆಯ ಮೂಲಕ ಕನ್ನಡಕ್ಕೆ ಅವಮಾನ ಮಾಡುವ ಕೆಲಸ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.

ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ತಾನಾಜಿ ತೋರಣೆಕರ್, ರಮೇಶ ಶೆಳಕೆ, ಬಸವರಾಜ ಅಲ್ಲಾಪುರ, ಸಂಜೀವ ಜಾಧವ್, ಸಂದೀಪ ಕೌಡಗಾವೆ, ಮುನೀರಸಾಬ್ ಸಂತಪುರ, ಕರ್ನಾಟಕ ರಕ್ಷಣಾ ವೇದಿಕೆಯ ಅನೀಲ ದೇವಕತೆ, ನರಸಿಂಗ ಹಕ್ಕೆ, ನಾರಾಯಣ ಕಾಂಬಳೆ, ನವೀನರಾಜ್ ಹಾಗೂ ನಾಗೇಶ ವಗ್ಗೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT