ಶನಿವಾರ, ಅಕ್ಟೋಬರ್ 16, 2021
29 °C

ಸಚಿವ ಸಂಪುಟದಿಂದ ಚವಾಣ್‌ ಕೈಬಿಡಿ: ಮಾದಿಗ ದಂಡೋರಾ ಸಂಘಟನೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ‘ಸುಳ್ಳು ಜಾತಿ ಪ್ರಮಾಣಪತ್ರ ಪಡೆದ ಔರಾದ್‌ ಶಾಸಕ ಪ್ರಭು ಚವಾಣ್‌ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು’ ಎಂದು ಮಾದಿಗ ದಂಡೋರಾ ಸಂಘಟನೆ ರಾಜ್ಯ ಘಟಕದ ಅಧ್ಯಕ್ಷ ಬಿ. ನರಸಪ್ಪ ದಂಡೋರಾ ಒತ್ತಾಯಿಸಿದರು.

ಸಚಿವ ಪ್ರಭು ಚವಾಣ್ ಅವರು ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯ ಬಗೆಗೆ ಹಗುರವಾಗಿ ಮಾತನಾಡಿದ್ದಾರೆ. ಆಯೋಗವು ರಾಜ್ಯದಾದ್ಯಂತ ಸಮೀಕ್ಷೆ ನಡೆಸಿ ಸಮಗ್ರ ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಚವಾಣ್‌ ಹೇಳಿಕೆ ಖಂಡನೀಯ. ಸರ್ಕಾರ ತಕ್ಷಣ ಆಯೋಗದ ವರದಿ ಜಾರಿ ಮಾಡಬೇಕು’ ಎಂದು ನಗರದಲ್ಲಿ ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ಒತ್ತಾಯಿಸಿದರು.

ಜಿಲ್ಲೆಯಲ್ಲಿ ಪರಿಶಿಷ್ಟರ ನಕಲಿ ಜಾತಿ ಪ್ರಮಾಣಪತ್ರ ಪಡೆಯುವವರ ಹಾವಳಿ ಹೆಚ್ಚಾಗಿದೆ. ಅಧಿಕಾರಿಗಳು ಸರಿಯಾಗಿ ದಾಖಲೆ ಪರಿಶೀಲಿಸದ ನಂತರವೇ ಜಾತಿ ಪ್ರಮಾಣಪತ್ರ ಕೊಡಬೇಕು. ನಕಲಿ ಜಾತಿ ಪ್ರಮಾಣಪತ್ರ ಪಡೆದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಒತ್ತಾಯಿಸಿ ಅಕ್ಟೋಬರ್ 11 ರಂದು ಬೀದರ್‌ ಬಂದ್‌ ಮಾಡಲಾಗುವುದು ಎಂದು ಸಂಘಟನೆಯ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಫರ್ನಾಂಡಿಸ್ ಹಿಪ್ಪಳಗಾಂವ್ ತಿಳಿಸಿದರು.

ಜೆ.ಎಂ.ದೇವರಾಜ್, ವಿಜಯಕುಮಾರ ಹಿಪ್ಪಳಗಾಂವ ಹಾಗೂ ಪ್ರದೀಪ ಹೆಗಡೆ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.